ಕಾಂಗ್ರೆಸ್ ಅಭ್ಯರ್ಥಿ ವಾಹನ ಜಪ್ತಿ
ಸೂಲಿಬೆಲೆ: ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎನ್.ನಾಗರಾಜ್ ಶುಕ್ರವಾರ ಪ್ರಚಾರ ನಡೆಸುತ್ತಿದ್ದ ವೇಳೆ ಅನಧಿಕೃತ ಪರವಾನಿಗೆ ಇಲ್ಲದೆ ಸಂಚರಿಸಿ, ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಅಭ್ಯರ್ಥಿಗೆ ಸೇರಿದ ಎರಡು ವಾಹನಗಳನ್ನು ಚುನಾವಣೆ ಆಯೋಗದ ಪ್ಲೇಯಿಂಗ್ ಸ್ಕ್ಯಾಡ್ ಹಾಗೂ ಸ್ಥಿರ ಕಣ್ಗಾವಲು ಪಡೆ ಅಧಿಕಾರಿಗಳ ಜಂಟಿ ಕಾರ್ಯಚರಣೆಯಲ್ಲಿ ಜಪ್ತಿ ಮಾಡಿ ಪೊಲೀಸರ ವಶಕ್ಕೆ ನೀಡಿದ್ದಾರೆ. ಸೂಲಿಬೆಲೆ ಪೊಲೀಸ್ಠಾಣೆ ವ್ಯಾಪ್ತಿಯ ಮುತ್ತಕದಹಳ್ಳಿ ಸೇರಿದಂತೆ ನಾನಾ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚುನಾವಣೆ ಪ್ರಚಾರ ನಡೆಸುತ್ತಿದ್ದರು.ಈ ವೇಳೆ ಅಭ್ಯರ್ಥಿ ಜೊತೆಯಲ್ಲಿ ಪರವಾನಿಗೆ ಇಲ್ಲದೆ ಸಂಚರಿಸುತ್ತಿದ್ದ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲ್ಲಪ್ಪ ಅವರ ಕಾರು ಸೇರಿದಂತೆ ಎರಡು ವಾಹನಗಳನ್ನು ಅಧಿಕಾರಿಗಳು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.