ಬಿಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿ ಪ್ರಚಾರ
ದೇವನಹಳ್ಳಿ: ದೇವನಹಳ್ಳಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್.ನಾರಾಯಣಸ್ವಾಮಿ ಶುಕ್ರವಾರ ಪಟ್ಟಣದಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ದೇವನಹಳ್ಳಿಯಲ್ಲಿ ಮೂರು ಭಾಗಗಳಾಗಿ ಹೋಗಿದ್ದು ಬಿಜೆಪಿ ಶೇ.60 ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಕೆಜೆಪಿ ಪರ ವಾಲಿದ್ದಾರೆ ಎಂದು ತಿಳಿಸಿದರು.
ಹಾಜರಿಗೆ ಸೂಚನೆ
ನೆಲಮಂಗಲ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2013ರ ಚುನಾವಣೆಗೆ ನೇಮಕವಾಗಿರುವ ನೆಲಮಂಗಲ ಕ್ಷೇತ್ರದ ಮತಗಟ್ಟೆ ಅಧಿಕಾರಿಗಳು ಇತರೆ ವಿಧಾನಸಭಾ ಕ್ಷೇತ್ರಕ್ಕೆ ನಿಯೋಜಿಸಲಾಗಿದ್ದು, ಸದರಿ ಅಧಿಕಾರಿಗಳು ನೇಮಕಾತಿ ಆದೇಶದಲ್ಲಿ ತೋರಿಸಿರುವ ಸ್ಥಳದಲ್ಲಿ ತರಬೇತಿಗಾಗಿ ಏ.29ರಂದು ಬೆಳಿಗ್ಗೆ 10-00 ಗಂಟೆಗೆ ಕಡ್ಡಾಯವಾಗಿ ಹಾಜರಾಗುವಂತೆ ಸಹಾಯಕ ಚುನಾವಣಾಧಿಕಾರಿ ವಿ.ರಾಜೇಂದ್ರ ತಿಳಿಸಿದ್ದಾರೆ.
ಮಾಗಡಿಗೆ ಬಿಎಸ್‌ವೈ
ಮಾಗಡಿ: ಮಾಗಡಿ ಕೆಂಪೇಗೌಡ ಬಯಲು ರಂಗಮಂದಿರದ ಬಳಿ ಏ.27ರ ಬೆಳಿಗ್ಗೆ 11 ಗಂಟೆಗೆ ಕೆಜೆಪಿ ಅಭ್ಯರ್ಥಿ ಎಚ್.ಎಂ. ಕೃಷ್ಣಮೂರ್ತಿ ಪರ ಮತಯಾಚಿಸಲು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಗಮಿಸಲಿದ್ದಾರೆ ಎಂದು ತಾಲೂಕು ಕೆಜೆಪಿ ಘಟಕದ ಪ್ರಕಟಣೆ ತಿಳಿಸಿದೆ.