ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

'ಮತದಾರರನ್ನು ಪ್ರೇರೇಪಿಸಿ'

Vishwanath S
Updated On : 26 Apr 2013, 11:43 am

ಕ.ಪ್ರ.ವಾರ್ತೆ ರಾಮನಗರ  ಏ.25
ಸುಶಿಕ್ಷಿತರೇ ಹೆಚ್ಚಾಗಿರುವ ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡಿಮೆಯಾಗುತ್ತಿದ್ದು, ಮತದಾನ ಪ್ರಮಾಣ ಹೆಚ್ಚುವಂತೆ ಮತದಾರರನ್ನು ಪ್ರೇರೇಪಿಸಬೇಕು ಎಂದು ಜಿ.ಪಂ. ಉಪಕಾರ್ಯದರ್ಶಿ ಡಾ.ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮತದಾರರಲ್ಲಿ ಜಾಗಣತಿ ಮೂಡಿಸಿ ಮತದಾನ ಹೆಚ್ಚಿಸುವ ಸಂಬಂಧ ಗುರುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಾದ್ಯಂತ 2 ಲಕ್ಷ ಭಿತ್ತಿ ಪತ್ರಗಳನ್ನು ಮನೆ ಬಾಗಿಲಿಗೆ ಅಂಟಿಸಿ, ಯಾವುದೇ ಆಮಿಷಗಳಿಗೆ ಒಳಗಾಗದೆ ತಪ್ಪದೇ ಮತದಾನ ಮಾಡುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಎಸ್.ಎಂ.ಚಂದ್ರ, ಡಿಎಚ್‌ಒ ರಘುನಾಥ್, ಡಿಡಿಪಿಐ ಪ್ರಹ್ಲಾದಗೌಡ, ನಗರಸಭೆ ಆಯುಕ್ತ ಯಶವಂತ್ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement