'ಜಿಲ್ಲಾ ಪೊಲೀಸ್ ಕಚೇರಿ ಸಂಪರ್ಕಿಸಿ'
ರಾಮನಗರ: ಚುನಾವಣಾ ಕರ್ತವ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಮಾಜಿ ಯೋಧರು ಶೀಘ್ರವೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ನವೀನ್ರಾಜ್ ಸಿಂಗ್ ಸೂಚಿಸಿದ್ದಾರೆ.
'ಹೆಚ್ಚು ಅಭಿವೃದ್ಧಿ ಕಾರ್ಯಗಳಿಗೆ ಒತ್ತು'
ವಿಜಯಪುರ: ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಇನ್ನೂ ಹೆಚ್ಚಿನ ಅನುದಾನದೊಂದಿಗೆ ಪಟ್ಟಣದ ಅಭಿವೃದ್ಧಿ ಕಾರ್ಯಗಳಿಗೆ ಒತ್ತುಕೊಡಲಾಗುವುದು ಎಂದು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟಸ್ವಾಮಿ ತಿಳಿಸಿದರು. ಅವರು ಪಟ್ಟಣದಲ್ಲಿ ಕೆ.ಎಂ.ಮಧು ಮತ್ತು ಸ್ನೇಹಿತರ ಮುಂದಾಳತ್ವದಲ್ಲಿ ನೂರಾರು ಯುವ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡ ಸಂದರ್ಭದಲ್ಲಿ ಮಾತನಾಡಿದರು. ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಜಗನ್ನಾಥ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.