ಜೆಡಿಎಸ್‌ನಿಂದ ಅಲ್ಪಸಂಖ್ಯಾತರ ಅಭಿವೃದ್ಧಿ
ಕ.ಪ್ರ.ವಾರ್ತೆ , ರಾಮನಗರ , ಏ.27
ಅಲ್ಪ ಸಂಖ್ಯಾತರ ಹಿತ ಮತ್ತು ಅಭಿವೃದ್ಧಿ ಎಚ್.ಡಿ.ಕುಮಾರಸ್ವಾಮಿ ನಾಯಕತ್ವದ ಜೆಡಿಎಸ್‌ನಿಂದ ಮಾತ್ರವೇ ಸಾಧ್ಯ ಎಂದು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.
ನಗರದ ಮುಸ್ಲಿಂ ವಾರ್ಡ್‌ಗಳಲ್ಲಿ ಶನಿವಾರ ಪಕ್ಷದ ಅಭ್ಯರ್ಥಿ ಕುಮಾರಸ್ವಾಮಿ ಪರ ಮತಯಾಚಿಸಿದ ಅವರು, 20 ತಿಂಗಳ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕುಮಾರಸ್ವಾಮಿ ಅವರು ಅಲ್ಪ ಸಂಖ್ಯಾತರಿಗೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಅವರನ್ನು ಕಳೆದ ಬಾರಿಗಿಂತ ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ತಿಳಿಸಿದರು.
ಸಿಎಂ ಆಗೋದು ನಿಶ್ಚಿತ: ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಆಗುವುದು ನಿಶ್ಚಿತ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗ್ಯತೆ ಎಲ್ಲರಿಗೂ ತಿಳಿದಿದೆ. ಹಣ ಕೊಟ್ಟು ಎಲ್ಲ ಕಾಲಕ್ಕೂ ಮತದಾರರನ್ನು ಖರೀದಿಸಲಾಗದು ಎನ್ನುವುದನ್ನು ಅವರು ಅರಿತುಕೊಳ್ಳಬೇಕು ಎಂದು ಹೇಳಿದರು.
ಪ್ರಚಾರ ಕಾರ್ಯಕ್ರಮದಲ್ಲಿ ಶಾಸಕ ಕೆ.ರಾಜು, ವಿಧಾನ ಪರಿಷತ್ಸ್‌ದಸ್ಯ ಅಪ್ಸರ್ ಆಗಾ, ಜೆಡಿಎಸ್ ಮುಖಂಡರಾದ ಡಿ.ಗಿರೀಗೌಡ, ಸಾಬಾನ್ ಸಾಬ್ ಇದ್ದರು.