ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಕಾಂಗ್ರೆಸ್ ಅಭ್ಯರ್ಥಿ ಶಂಕರ್ ಪರ ಸಾಹಿತಿಗಳ ಪ್ರಚಾರ

Rashmi Kasaragodu
Updated On : 30 Apr 2013, 12:36 pm

ಕ.ಪ್ರ.ವಾರ್ತೆ   ಬೆಂಗಳೂರು   ಏ.29
ಕೆಲ ದಿನಗಳ ಹಿಂದೆ ಕಾಂಗ್ರೆಸ್‌ಗೆ ಮತಹಾಕಿ ಎಂದಿದ್ದ ರಾಜ್ಯದ ಖ್ಯಾತ ಸಾಹಿತಿಗಳು ಈಗ ಅದೇ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ಇಳಿದಿದ್ದಾರೆ.
ಬೆಂಗಳೂರಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಹಿತಿಗಳು ಶ್ರೀಸಾಮಾನ್ಯರ ಮತದಾನ ವೇದಿಕೆ ಆಶ್ರಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎಲ್. ಶಂಕರ್ ಪರವಾಗಿ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್. ಅನಂತಮೂರ್ತಿ, ಪ್ರೊ.ಕೆ. ಮರುಳಸಿದ್ದಪ್ಪ, ಪ್ರೊ.ಎಸ್.ಜಿ. ಸಿದ್ದರಾಮಯ್ಯ ಸೇರಿದಂತೆ ಹಲವು ಸಾಹಿತಿಗಳು ದಾಸರಹಳ್ಳಿಯಲ್ಲಿ ಪಾದಯಾತ್ರೆ ನಡೆಸಿ ಶಂಕರ್ ಗೆಲುವಿಗೆ ಆಶೀರ್ವಾದ ಮಾಡುವಂತೆ ಜನತೆಯಲ್ಲಿ ಮನವಿ ಮಾಡಿದರು.
ಸ್ಥಿರ, ಅಭಿವೃದ್ಧಿ ಪರ ಮತ್ತು ನ್ಯಾಯಯುತ ಸರ್ಕಾರ ರಚನೆಗೆ ಪ್ರತಿಯೊಬ್ಬರು ತಮ್ಮ ಮತ ಚಲಾಯಿಸಬೇಕು. ಆದರೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಯ ಹಿನ್ನೆಲೆ, ಆತ ಹೊಂದಿರುವ ಜನಪರ ಕಾಳಜಿ ಬಗ್ಗೂ ಅರ್ಥ ಮಾಡಿಕೊಳ್ಳಬೇಕು.
ಶಂಕರ್‌ಗೆ ಈ ಎಲ್ಲ ಅರ್ಹತೆಗಳಿದ್ದು, ಶಾಸನ ಸಭೆಯಲ್ಲಿ ಕ್ಷೇತ್ರದ ಜನರ ಬೇಡಿಕೆಗಳನ್ನು ಸಮರ್ಥವಾಗಿ ಮಂಡಿಸಬಲ್ಲರು. ಸಮ್ಮಿಶ್ರ ಸರ್ಕಾರದಿಂದ ದೇಶ ಹಾಗೂ ರಾಜ್ಯದ ಅಭಿವೃದ್ಧಿ ಅಸಾಧ್ಯವಾದ್ದರಿಂದ ಸುಭದ್ರ ಸರ್ಕಾರಕ್ಕಾಗಿ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು.
ಕಾಂಗ್ರೆಸ್‌ಗೆ ಅಧಿಕಾರ ನಿಶ್ಚಿತ: ಕ್ಷೇತ್ರದ ಚೊಕ್ಕಸಂದ್ರ ವಾರ್ಡ್‌ನಲ್ಲಿ ಪಾದಯಾತ್ರೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಬಿ.ಎಲ್. ಶಂಕರ್, ಬಿಜೆಪಿ ಸರ್ಕಾರದ ಭ್ರಷ್ಟ ಆಡಳಿತದಿಂದ ಜನತೆ ಬೇಸತ್ತಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು, ರಾಜ್ಯದಲ್ಲೂ ಮತದಾರ ನಮ್ಮ ಪಕ್ಷಕ್ಕೆ ಆಶೀರ್ವಾದ ಮಾಡುತ್ತಾನೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement