ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ
ಕ.ಪ್ರ.ವಾರ್ತೆ ಮಾಗಡಿ ಏ.29
ಸ್ವಾತಂತ್ರ್ಯ ಬಂದು 6 ದಶಕಗಳು ಕಳೆದರೂ ಇನ್ನೂ ದೇಶದಲ್ಲಿ ಮೇಲು, ಕೀಳು ಎಂಬ ಭಾವನೆ ಬದಲಾಗಿಲ್ಲ, ಸಮಾನತೆ ಸಾಧಿಸಲಿಲ್ಲ. ಕುಡಿಯಲು ನೀರಿಲ್ಲ, ಇರಲು ಎಷ್ಟೋ ಮಂದಿಗೆ ಸೂರಿಲ್ಲ. ಇಂತಹ ದುಸ್ಥಿತಿಯಲ್ಲಿಯೂ ಶೋಷಿತರು ಬದುಕಿನ ಬಂಡಿ ಎಳೆಯುತ್ತಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಸಿದ್ದಲಿಂಗಯ್ಯ ವಿಷಾದಿಸಿದರು. ಅವರು ಮಾಗಡಿ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸೋಮವಾರ ದಲಿತ ಸಂಘರ್ಷ ಸಮಿತಿ ಏರ್ಪಡಿಸಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 122ನೇ ಜಯಂತ್ಯುತ್ಸವ ಸಮಾರಂಭದಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ದಲಿತ ಮುಖಂಡ ಬಿ.ವಿ. ಜಯರಾಮು ಮಾತನಾಡಿ ಸಮಾನತೆಯ ಭದ್ರಭುನಾದಿ ಹಾಕಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಶಿಕ್ಷಕ ಮಾರಣ್ಣ ಮಾತನಾಡಿದರು.