ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಬಿಜೆಪಿ ಸರ್ಕಾರದಿಂದ ರಾಮನಗರಕ್ಕೆ ಹಣ ಬಿಡುಗಡೆ ಮಾಡದೆ ತಾರತಮ್ಯ

Rashmi Kasaragodu
Updated On : 30 Apr 2013, 12:38 pm

ಕ.ಪ್ರ.ವಾರ್ತೆ   ಕನಕಪುರ   ಏ.29
ಬಿಜೆಪಿ ಸರ್ಕಾರ ರಾಮನಗರ ಕ್ಷೇತ್ರದ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡದೆ ತಾರತಮ್ಯ ಎಸಗಿದೆ, ಕುಮಾರಸ್ವಾಮಿಯವರು ಸಂಸದರ ಅನುದಾನದಿಂದ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ರಾಜ್ಯಾದ್ಯಂತ ಪ್ರಚಾರ ಕೈಗೊಳ್ಳುವ ಜವಾಬ್ದಾರಿಯಿಂದ ಕುಮಾರಸ್ವಾಮಿಯವರು ಕ್ಷೇತ್ರಕ್ಕೆ ಆಗಮಿಸಲಾಗಿಲ್ಲ, ಮುಖಂಡರುಗಳೇ ಪ್ರಚಾರ ನಡೆಸುತ್ತಿದ್ದೇವೆ ಎಂದು ಜೆಡಿಎಸ್ ಮುಖಂಡ ಕಬಡ್ಡಿ ಬಾಬು ಹೇಳಿದ್ದಾರೆ.
 ಅವರು ಕೊಳ್ಳಿಗನಹಳ್ಳಿ ಗ್ರಾಪಂ ವ್ಯಾಪ್ತಿಯ ಹಳ್ಳಿಯಲ್ಲಿ ಕುಮಾರಸ್ವಾಮಿ ಪರವಾಗಿ ಚುನಾವಣಾ ಪ್ರಚಾರ ನಡೆಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ನೂರಾರು ಮಂದಿ ಯುವಕರು ಕಾಂಗ್ರೆಸ್ ತೊರೆದು ಜೆಡಿಎಸ್‌ಗೆ ಸೇರ್ಪಡೆಗೊಡರು.  ಕಾಂಗ್ರೆಸ್ ಅಭ್ಯರ್ಥಿ ಮರಿದೇವರು ಕುಮಾರಸ್ವಾಮಿ ಕ್ಷೇತ್ರವನ್ನು ನಿರ್ಲಕ್ಷಿಸಿದ್ದಾರೆ ಎಂದು ಅಪಪ್ರಚಾರ ನಡೆಸಿದ್ದಾರೆ. ರಾಮನಗರವನ್ನು ಜಿಲ್ಲೆಯನ್ನಾಗಿಸಿ ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಮಾಡಿದ ಕೀರ್ತಿ ಕುಮಾರಸ್ವಾಮಿಯವರದ್ದು, ಕಣ್ಣಿಗೆ ಕಾಣುವ ಸತ್ಯವನ್ನೇ ಸುಳ್ಳು ಎಂದು ತಿರುಚಿ ಹೇಳಿದರೆ ಉಪಯೋಗವಿಲ್ಲ ಎಂದು ಕಬಡ್ಡಿ ಬಾಬು ಟೀಕಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement