ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
ದೇವನಹಳ್ಳಿ: ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಚುನಾವಣಾ ಪ್ರಚಾರ ಮಾಡುತ್ತಿದ್ದಾಗ ಜೆಡಿಎಸ್ ಕಾರ್ಯಕರ್ತರೊಬ್ಬರು ಮಚ್ಚಿನಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಬೆಟ್ಟೇನಹಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡಿದಿದೆ.
ಕಾಂಗ್ರೆಸ್ ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ತೊಡಗಿದಾಗ ಮುನಿಕೊರ್ಲಪ್ಪ ಎಂಬವರ ಮೇಲೆ ಜೆಡಿಎಸ್‌ನ ಮೂರ್ತಿ ಎಂಬವರು ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಜಾಲಿಗೆ ಗ್ರಾಮದ ಮುಖಂಡ ಶ್ರೀರಾಮಪ್ಪ ತಿಳಿಸಿದ್ದಾರೆ. ಹಲ್ಲೆಗೊಳಗಾದ ಮುನಿಕೂರ್ಲಪ್ಪ ಅವರನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ತಲೆಗೆ ಹೊಲಿಗೆ ಹಾಕಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ವೆಂಕಟಸ್ವಾಮಿ 'ಗ್ರಾಮಗಳಲ್ಲಿ ಯಾವುದೇ ಪಕ್ಷದ ಚುನಾವಣಾ ಪ್ರಚಾರದ ವೇಳೆ ಸಂಬಂಧಪಟ್ಟ ಠಾಣೆಯ ಪೊಲೀಸರು ರಕ್ಷಣೆ ನೀಡಬೇಕು ಎಂದರು.
ವಿಶ್ವನಾಥಪುರ ಠಾಣೆಯಲ್ಲಿ ದೂರು ದಾಖಲಾಗಿದೆ.