ಕಾಂಗ್ರೆಸ್ ಬೆಂಬಲಿಸಲು ನಂಜುಂಡಿ ಮನವಿ
ಕ.ಪ್ರ.ವಾರ್ತೆ ಬೆಂಗಳೂರು ಏ.30
ರಾಜ್ಯ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ.ನಂಜುಂಡಿ ನೇತೃತ್ವದಲ್ಲಿ ವಿಶ್ವಕರ್ಮ ಸಮಾಜದ 200ಕ್ಕೂ ಹೆಚ್ಚು ಮುಖಂಡರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫರ್ನಾಂಡಿಸ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಸಮಾಜದ ಹಿತದೃಷ್ಟಿಯಿಂದ ವಿಶ್ವಕರ್ಮ ಅಭಿವೃದ್ಧಿ ನಿಗಮ ಸ್ಥಾಪಿಸುವ ಭರವಸೆಯನ್ನು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದೆ. ಈ ಹಿನ್ನೆಲೆಯಲ್ಲಿ ಸಮಾಜ ಬಾಂಧವರು ಕಾಂಗ್ರೆಸ್ ಬೆಂಬಲಿಸುವಂತೆ ನಂಜುಂಡಿ ಕರೆ ನೀಡಿದ್ದಾರೆ. ಅದೇ ರೀತಿ ಅಖಿಲ ಕರ್ನಾಟಕ ಕ್ಷತ್ರಿಯ ಮಹಾ ಒಕ್ಕೂಟವೂ ಕಾಂಗ್ರೆಸ್ ಬೆಂಬಲಿಸಲು ನಿರ್ಧರಿಸಿದೆ ಎಂದು ಸಂಘದ ಅಧ್ಯಕ್ಷ ಟಿ.ಡಿ.ಖಂಡೇರಾವ್ ಟಿಕಾರೆ ತಿಳಿಸಿದ್ದಾರೆ.