ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಅಪೌಷ್ಟಿಕತೆ ನಿವಾರಿಸಿ ಆರೋಗ್ಯವಂತರನ್ನಾಗಿಸಿ: ಶಾಸಕ

Srinivasa Murthy VN
Updated On : 2 Aug 2013, 1:33 am

ಕ.ಪ್ರ.ವಾರ್ತೆ ನೆಲಮಂಗಲ ಆ.1
ಮಕ್ಕಳಲ್ಲಿರುವ ಅಪೌಷ್ಟಿಕತೆ ನಿವಾರಿಸಿ  ಅವರನ್ನು  ಉತ್ತಮ ಆರೋಗ್ಯವಂತರಾಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಹೇಳಿದರು.
ಅವರು ಗುರುವಾರ ಪಟ್ಟಣದ ಜೂನಿಯರ್ ಕಾಲೇಜಿನ ಸರ್ಕಾರಿ ಹಿರಿಯ ಪ್ರೌಢಶಾಲಾ ಆವರಣದಲ್ಲಿ  ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಮ್ಮಿಕೊಂಡಿದ್ದ  ಸರ್ಕಾರದ ನೂತನ ಕ್ಷೀರ ಭಾಗ್ಯ ಯೋಜನೆ  ಕಾರ್ಯಕ್ರಮವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ಹಾಲು ವಿತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಶಾಲಾ ಮಕ್ಕಳ ಆರೋಗ್ಯದಲ್ಲಿ ವಿಟಮಿನ್ ಅಂಶ ಕಡಿಮೆಯಾಗುವುದರಿಂದ ಅವರ ಚಲನ ವಲನಗಳು ನಿಧಾನಗತಿಯಾಗುತ್ತದೆ. ನಮ್ಮ ದೇಶದಲ್ಲಿರುವ ಬಡತನ ಹಾಗೂ ವಿದ್ಯೆಯ ಕೊರತೆಯಿಂದಾಗಿ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಪೌಷ್ಟಿಕ ಆಹಾರ ನೀಡಲು ಅಸಹಾಯಕರಾಗುತ್ತಾರೆ. ಸರ್ಕಾರದ ಈ ಕ್ಷೀರ ಭಾಗ್ಯ ಯೋಜನೆಯ ಫಲಾನುಭವಿಗಳಾದ ಶಾಲಾ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಬಹಳ ಉಪಯುಕ್ತ ಎಂದರು.
ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ 32 ಸಾವಿರಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳಿದ್ದು, ಅವರಿಗೆ ವಾರದ ಮೂರು ದಿನ ಮಿಲ್ಕ್ ಪೌಡರ್ ಅನ್ನು ಬೆರೆಸಿ ಒಬ್ಬ ವಿದ್ಯಾರ್ಥಿಗೆ 150 ಮಿಲಿ ಹಾಲನ್ನು ನೀಡುತ್ತೇವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮನಾಯಕ್ ತಿಳಿಸಿದರು.
 ಶಾಲೆಗಳಲ್ಲಿ ಹಾಲಿನ ಪುಡಿಯನ್ನು ಶುದ್ಧ ನೀರಿನಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಬಮೂಲ್‌ನ ನಿರ್ದೇಶಕ ತಿಮ್ಮರಾಜು ತಿಳಿಸಿದರು.
ಜಿ.ಪಂ.ಸದಸ್ಯ ಎನ್.ಎಂ.ರಾಮು, ಪುರಸಭಾ ಸದಸ್ಯರಾದ ಶಿವಕುಮಾರ್, ಎಚ್.ಜಿ.ರಾಜು, ತಾ.ಪಂ.ಮಾಜಿ ಅಧ್ಯಕ್ಷ ಪುಟ್ಟಗಂಗಯ್ಯ, ಅರೆಬೊಮ್ಮನಹಳ್ಳಿ ಗ್ರಾ.ಪಂ.ಮಾಜಿ ಅಧ್ಯಕ್ಷ ಅಂಜನಮೂರ್ತಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement