ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಇಂದು ಬೆಂಗಳೂರಿಗೆ ದಿಗ್ವಿಜಯ್ ಸಿಂಗ್

Rashmi Kasaragodu
Updated On : 6 Aug 2013, 1:21 am

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆ ಬಗ್ಗೆ ರಣತಂತ್ರ ರೂಪಿಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ ಸಿಂಗ್ ಬುಧವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಈ ಸಂಬಂಧ ಬುಧವಾರ ಮಹತ್ವದ ಸಭೆ ನಡೆಯಲಿದ್ದು, ಚುನಾವಣಾ ಉಸ್ತುವಾರಿ ಹೊತ್ತಿರುವ ಸಚಿವರು, ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತ ಮುಖಂಡರ ಜತೆ ಅವರು ಚರ್ಚೆ ನಡೆಸಲಿದ್ದಾರೆ. ಈ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲೇಬೇಕೆಂದು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಸ್ಪಷ್ಟ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಿಗ್ವಿಜಯ್ ಸಿಂಗ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಇದರ ಜತೆಗೆ ನಗರದ ಅರಮನೆ ಮೈದಾನದಲ್ಲಿ ಅವರು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಇಫ್ತಿಯಾರ್ ಕೂಟವನ್ನು ಆಯೋಜಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಭಾಗವಹಿಸಲಿದ್ದಾರೆ.
ಸೆಲ್ವಕುಮಾರ್-ಕೃಷ್ಣ ಚರ್ಚೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ಎಐಸಿಸಿ ಕಾರ್ಯದರ್ಶಿ ಸೆಲ್ವಕುಮಾರ್ ಸೋಮವಾರ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement