ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಇಂದು ಶ್ರೀರಾಮ ಕಲ್ಯಾಣೋತ್ಸವ

Rashmi Kasaragodu
Updated On : 8 Aug 2013, 12:55 pm

ಹೊಸಕೋಟೆ: ತಾಲೂಕಿನ ಜಡಿಗೇನಹಳ್ಳಿ  ಹೋಬಳಿಯ  ದೇವಶೆಟ್ಟಿಹಳ್ಳಿ ಗ್ರಾಮದಲ್ಲಿ ಶ್ರೀ ಪ್ರಸನ್ನ ವೀರಾಂಜನೇಯ ಸ್ವಾಮಿ ಗೋಪುರ ಬ್ರಹ್ಮಕಲಶ ಸ್ಥಾಪನೆಯ ಅಂಗವಾಗಿ  ಏರ್ಪಡಿಸಿದ್ದ  ಮಂಡಲಪೂಜೆಯ  ಸಮಾರೋಪ ಕಾರ್ಯಕ್ರಮದ  ಪ್ರಯುಕ್ತ ಆ.8 ರಂದು  ಶ್ರೀರಾಮ ಸೀತಾ ಕಲ್ಯಾಣೋತ್ಸವ ಏರ್ಪಡಿಸಲಾಗಿದೆ.  ಇದೇ  ಸಂದರ್ಭದಲ್ಲಿ ಸಂಗೀತ  ಕಚೇರಿ ಸಹ ನಡೆಯಲಿದೆ  ಎಂದು ಕಾರ್ಯಕ್ರಮದ  ಸೇವಾಕರ್ತ  ಎಂ. ಕೃಷ್ಣಪ್ಪ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಪ್ರತಿಭಾ ಪುರಸ್ಕಾರ
ದೊಡ್ಡಬಳ್ಳಾಪುರ: ಇಲ್ಲಿನ ಕೊಂಗಾಡಿಯಪ್ಪ ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಗಳಲ್ಲಿ ವ್ಯಾಸಂಗ ಮಾಡಿ ವಿವಿಧ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆ.8ರ ಗುರುವಾರ ನಡೆಯಲಿದೆ. ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ, ಶಾಸಕ ಟಿ.ವೆಂಕಟರಮಣಯ್ಯ, ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ, ಪ.ಪೂ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಸಾವಿತ್ರಮ್ಮ ಮತ್ತಿತರರು ಭಾಗವಹಿಸಲಿದ್ದಾರೆ. ಇದೇ ವೇಳೆ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು, ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ವಕೀಲರ ಸಂಘದ ಕ್ರಿಕೆಟ್ ಟೂರ್ನಿ
ದೊಡ್ಡಬಳ್ಳಾಪುರ: ಇಲ್ಲಿನ ತಾಲೂಕು ವಕೀಲರ ಸಂಘದ ನೇತೃತ್ವದಲ್ಲಿ ಆ.9ರ ಶುಕ್ರವಾರದಿಂದ ಆ.11ರ ಭಾನುವಾರದವರೆಗೆ ದೊಡ್ಡಬಳ್ಳಾಪುರ ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಜನಾರ್ದನ್ ತಿಳಿಸಿದ್ದಾರೆ. 3 ದಿನಗಳ ಕಾಲ ನಡೆಯುವ ಪಂದ್ಯಾವಳಿಯಲ್ಲಿ ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ಗೌರಿಬಿದನೂರು, ಶಿಡ್ಲಘಟ್ಟ, ಚಿಂತಾಮಣಿ, ದೇವನಹಳ್ಳಿ, ಆನೇಕಲ್, ನೆಲಮಂಗಲ, ಮಾಗಡಿ ಮತ್ತು ರಾಮನಗರ ತಾಲೂಕುಗಳ ವಕೀಲರ ತಂಡಗಳು ಭಾಗವಹಿಸಲಿವೆ ಎಂದು ಪ್ರಕಟಣೆ ತಿಳಿಸಿದೆ.
ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ
ರಾಮನಗರ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯು ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಚನ್ನಪಟ್ಟಣದ ಸಾಧನ ವಿದ್ಯಾಲಯದ 9ನೇ ತರಗತಿ ವಿದ್ಯಾರ್ಥಿನಿ ಮೈತ್ರಿ ಪ್ರದರ್ಶಿಸಿದ್ದ ವಿದ್ಯುತ್ ಬೋರ್ಡ್ ಮಾದರಿಗೆ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement