ದೇವನಹಳ್ಳಿ ಜಿಲ್ಲಾ ಕೇಂದ್ರ; ಜಿ.ಚಂದ್ರಣ್ಣ ಬೆಂಬಲ
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಮೈಸೂರು ಹುಲಿ ಟಿಪ್ಪೂಸುಲ್ತಾನರ ಜನ್ಮ
ಸ್ಥಳವಾಗಿದ್ದು ಐತಿಹಾಸಿಕತ ಕೋಟೆ ಇರುವುದರಿಂದ ಪ್ರವಾಸಿ ಕೇಂದ್ರವಾಗಿರುವುದಲ್ಲದೆ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣವಾಗಿರುವುದರಿಂದ ಇಡೀ ವಿಶ್ವದಲ್ಲೇ ಗುರುತಿಸಿಕೊಳ್ಳುವಂತಾಗಿದೆ. ಅಲ್ಲದೆ ಜಿಲ್ಲಾ ಕೇಂದ್ರವಾಗಲು ಎಲ್ಲ ರೀತಿಯ ಅರ್ಹತೆ ಪಡೆದಿದೆ. ಆದ್ದರಿಂದ ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕ ಜಿ.ಚಂದ್ರಣ್ಣ ತಿಳಿಸಿದ್ದಾರೆ.
ದೇವನಹಳ್ಳಿ ಜಿಲ್ಲಾ ಕೇಂದ್ರ ಹೋರಾಟ ಸಮಿತಿಯವರು ಬುಧವಾರ ನಡೆದ ಸರ್ವಪಕ್ಷಗಳ ಮುಖಂಡರ ಸಭೆಗೆ ತಮ್ಮನ್ನು ಆಹ್ವಾಮಿಸಿದ್ದು ಕಾರಣಾಂತರಗಳಿಂದ ಸಭೆಗೆ ಹೋಗಲು ಸಾಧ್ಯವಾಗಿಲ್ಲ ಎಂದರು. ಆದರೆ ಮುಂದಿನ ದಿನಗಳಲ್ಲಿ ಜಿಲ್ಲಾ ಕೇಂದ್ರ ಹೋರಾಟ ಸಮಿತಿಯವರು ನಡೆಸುವ ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.