ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಚುನಾವಣೆಯಲ್ಲಿ ಕಾಂಗ್ರೆಸ್ ಧೂಳೀಪಟ

Rashmi Kasaragodu
Updated On : 9 Aug 2013, 12:57 pm

ಮಾಗಡಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಧೂಳೀಪಟವಾಗಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ  ಎಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದರು.
ಅವರು ಮಾಗಡಿಯಲ್ಲಿ  ಬೆಂಗಳೂರು ಗ್ರಾಮಾಂತರ ಲೋಕಸಭಾ ಉಪ ಚುನಾವಣೆ ಕುರಿತು  ಕಾರ್ಯಕರ್ತರ ಸಮಾಲೋಚನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಈ ಬಾರಿ ಉಪಚುನಾವಣೆ ಮುಂದಿನ ಲೋಕಸಭಾ ಚುನಾವಣೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಎರಡು ಉಪ ಚುನಾವಣೆಯಲ್ಲಿಯೂ ಜೆಡಿಎಸ್ ಅಭ್ಯರ್ಥಿಗಳನ್ನು ಅಧಿಕ ಮತಗಳಿಂದ ಗೆಲ್ಲಿಸಲು ಕಾರ್ಯಕರ್ತರು ಸನ್ನದರಾಗಬೇಕು.  ಎಚ್.ಡಿ. ದೇವೇಗೌಡ ಪ್ರಧಾನ ಮಂತ್ರಿಯಾಗಿದ್ದಾಗಲೇ ರಾಜ್ಯದಲ್ಲಿ ನೀರಾವರಿ ಯೋಜನೆ ಅನುಷ್ಠಾನಕ್ಕೆ 9 ಸಾವಿರ ಕೋಟಿ ನೀಡಿದ್ದು, ಕಾಂಗ್ರೆಸ್ ಸರ್ಕಾರವಲ್ಲ ಎಂದರು. ಬೆಂಗಳೂರು ಲೋಕಸಭಾ ಜೆಡಿಎಸ್  ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಮಾತನಾಡಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರು ಕೈಗೊಂಡ ಅಭಿವೃದ್ಧಿಯ ಸಾಧನೆಯೇ ನನ್ನ ಗೆಲವಿಗೆ ನಾಂದಿಯಾಗಲಿದೆ ಎಂದರು. ಶಾಸಕ ಎಚ್.ಸಿ. ಬಾಲಕೃಷ್ಣ ಮಾತನಾಡಿ ಅನಿತಾ ಕುಮಾರಸ್ವಾಮಿ ಅವರ ಸೋಲಿನ ನೋವನ್ನು ಹೋಗಲಾಡಿಸಲು ಕಾರ್ಯಕರ್ತರು ಕಾರ್ಯಪ್ರವೃತ್ತರಾಗಿ 50 ಸಾವಿರ ಅಧಿಕ ಮತ ನೀಡುವ ಮೂಲಕ ಲೋಕಸಭೆಗೆ ಆಯ್ಕೆ ಮಾಡುವಂತೆ ಕರೆ ಕೊಟ್ಟರು.  ಪಿ.ಜಿ.ಆರ್.ಸಿಂಧ್ಯಾ, ಮಾಜಿ ಸಚಿವ ಎ.ಕೃಷ್ಣಪ್ಪ ಮಾತನಾಡಿದರು. ನೆಲಮಂಗಲ ಶಾಸಕ ಡಾ.ಶ್ರೀನಿವಾಸಮೂರ್ತಿ, ಎಂಎಲ್ಸಿ ಇ.ಕೃಷ್ಣಪ್ಪ, ಬ್ಯಾಟಪ್ಪ, ಆ.ದೇವೇಗೌಡ, ಮುದ್ದುರಾಜ ಯಾದವ್, ಧನಂಜಯ, ನರಸಿಂಹಮೂರ್ತಿ  ಇತರರು ಇದ್ದರು.
ಅಧಿಕಾರಿಗಳ ಹಾಜರಿ ಕಡ್ಡಾಯ
ಹೊಸಕೋಟೆ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪಟ್ಟಣದ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಆ.15ರಂದು ನಡೆಯಲಿರುವ ಸ್ವಾತಂತ್ರ್ಯ  ದಿನಾಚರಣೆ ಕಾರ್ಯಕ್ರಮದಲ್ಲಿ ಸರಕಾರಿ ಇಲಾಖೆಗಳ ಎಲ್ಲಾ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು   ಎಂದು ಶಾಸಕ ಎನ್.ನಾಗರಾಜ್ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement