ಮತಯಂತ್ರಗಳ ಪರಿಶೀಲನಾ ಕಾರ್ಯ
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಉಪಚುನಾವಣೆಗೆ ಬಳಸಲಾಗುವ ವಿದ್ಯುನ್ಮಾನ ಮತಯಂತ್ರಗಳ ಪರಿಶೀಲನಾ ಕಾರ್ಯವು ನಗರದ ಹೊರ ವಲಯದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ಸುಮಾರು 3300 ನಿಯಂತ್ರಣ ಘಟಕ ಹಾಗೂ 4700 ಮತಯಂತ್ರ ಘಟಕಗಳ ಪರಿಶೀಲನಾ ಕಾರ್ಯವು ಜು.29 ರಿಂದಲೇ ಪ್ರಾರಂಭವಾಗಿದ್ದು, ಜಿಲ್ಲಾಧಿಕಾರಿ ವಿ.ಶ್ರೀರಾಮರೆಡ್ಡಿ ಅವರು ಎಸ್‌ಪಿ ಅನುಪಮ್ ಅಗ್ರವಾಲ್ ಅವರೊಂದಿಗೆ ಕಾಲೇಜಿಗೆ ಭೇಟಿ ನೀಡಿ ಇವಿಎಂಗಳ ಪರಿಶೀಲನಾ ಕಾರ್ಯವನ್ನು ವೀಕ್ಷಿಸಿದರು. ಸುಮಾರು 80 ರಿಂದ 100 ಸಿಬ್ಬಂದಿಗಳು ಪರಿಶೀಲನಾ ಕಾರ್ಯದಲ್ಲಿ ತೊಡಗಿದ್ದು, ಇನ್ನು 2 ದಿನ ನಡೆಯಲಿರುವ ಪರಿಶೀಲನೆಯ ನಂತರ ಇವಿಎಂಗಳನ್ನು ಚುನಾವಣಾ ಅಭ್ಯರ್ಥಿಗಳು ಅಥವಾ ಅವರ ಏಜೆಂಟರುಗಳ ಸಮಕ್ಷಮದಲ್ಲಿ ಕ್ಷೇತ್ರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳಾದ ತಹಸೀಲ್ದಾರ್‌ಗಳಿಗೆ ಹಸ್ತಾಂತರಿಸಲಾಗುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.