ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ

Rashmi Kasaragodu
Updated On : 10 Aug 2013, 1:03 am

ಬೆಂಗಳೂರು ಗ್ರಾಮಾಂತರ ಲೋಕಸಭಾ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಆ.24ರಂದು ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದೆ. ಈ ಸಂಬಂಧ ಜಿಲ್ಲಾಧಿಕಾರಿ ವಿ.ಶ್ರೀರಾಮರೆಡ್ಡಿ ಅವರು ಎಸ್‌ಪಿ ಅನುಪಮ್ ಅಗ್ರವಾಲ್ ಹಾಗೂ ಇತರೆ ಅಧಿಕಾರಿಗಳೊಂದಿಗೆ ಕಾಲೇಜಿಗೆ ಭೇಟಿ ನೀಡಿ ಎಣಿಕಾ ಕೇಂದ್ರದ ಸುತ್ತ ಕೈಗೊಳ್ಳಬೇಕಿರುವ ಭದ್ರತಾ ಕ್ರಮಗಳ ಕುರಿತು ಯೋಜನೆ ರೂಪಿಸಿದರು. ಎಣಿಕಾ ಕೇಂದ್ರದಲ್ಲಿ ಮತ ಎಣಿಕೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಿರುವ ಪೂರ್ವಸಿದ್ಧತೆ ಬಗ್ಗೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು ಕಾಲೇಜಿನಲ್ಲಿ ಎಣಿಕೆ ಸಂಬಂಧವಾಗಿ ಬೇಕಾಗಿರುವ ಸೌಲಭ್ಯಗಳು, ವಿದ್ಯುತ್ ಕಾಮಗಾರಿ, ಸ್ವಚ್ಛತೆ, ನಿರ್ವಹಣೆ ಬಗ್ಗೆ ಸಲಹೆ ಸೂಚನೆ ನೀಡಿ, ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದರು. ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಜಯಮಾಧವ್, ಕಾಲೇಜಿನ ಪ್ರಾಂಶುಪಾಲ ಡಾ.ಪುಂಡರೀಕ, ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಎಲ್.ಚಂದ್ರಶೇಖರ್, ಪೊಲೀಸ್ ಉಪಾಧೀಕ್ಷಕ ರಾಮಕೃಷ್ಣಪ್ಪ, ಇನ್ಸ್‌ಪೆಕ್ಟರ್‌ಗಳಾದ ವಿ.ಬಿ.ಭಾಸ್ಕರ್, ಪುರುಷೋತ್ತಮ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement