ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಲಾರಿ ಚಾಲಕನ ನಿಯಂತ್ರಣ ತಪ್ಪಿ 20 ಮಂದಿಗೆ ಗಾಯ

Rashmi Kasaragodu
Updated On : 12 Aug 2013, 12:44 pm

ಕ.ಪ್ರ.ವಾರ್ತೆ ಟಿ ರಾಮನಗರ  ಟಿ  ಆ.11
ತಿಥಿ ಕಾರ್ಯಕ್ಕೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಜಾನಪದ ಲೋಕದ ಬಳಿ ಭಾನುವಾರ ನಡೆದಿದೆ.
ತೀವ್ರವಾಗಿ ಗಾಯಗೊಂಡ ಮಧುಸೂದನ್, ತಿಮ್ಮೇಗೌಡ ಹಾಗೂ ಗೌರಮ್ಮ ಎಂಬುವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾನುವಾರ ಬೆಳಗ್ಗೆ ತಾಲೂಕಿನ ಜಾಲಮಂಗಲ ಗ್ರಾಮದಲ್ಲಿ ನಡೆಯುತ್ತಿದ್ದ ತಿಥಿ ಕಾರ್ಯಕ್ಕೆ ಮದ್ದೂರಿನ ಕೆ.ಎಂ.ದೊಡ್ಡಿ ಹಾಗೂ ಅಕ್ಕಪಕ್ಕದ ಗ್ರಾಮಗಳಿಂದ ಮಹಿಳೆಯರೂ ಸೇರಿದಂತೆ 30ಕ್ಕೂ ಹೆಚ್ಚು ಲಾರಿಯಲ್ಲಿ ಪ್ರಯಾಣ ಬೆಳೆಸಿದ್ದರು.  
ಲಾರಿಯು ಬೆಂಗಳೂರು ಮೈಸೂರು ಹೆದ್ದಾರಿಯ ಜಾನಪದ ಲೋಕದ ಬಳಿ ಬರುತ್ತಿದ್ದಾಗ ಲೋಕರುಚಿ ಹೋಟೆಲ್ ಮುಂಭಾಗ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಿದ್ದ ಕಾರು ಏಕಾಏಕಿ ಹಿಂದಕ್ಕೆ ಚಲಿಸಿದೆ. ಕಾರ್ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಲಾರಿಯನ್ನು ಬಲಕ್ಕೆ ತಿರುಗಿಸಿದ್ದಾನೆ.
ಈ ವೇಳೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಹಾಗೂ ಪಾದಚಾರಿಗೆ ಡಿಕ್ಕಿ ಹೊಡೆದು ನಂತರ ಕಾಂಪೌಂಡ್ಗೆ ಅಪ್ಪಳಿಸಿದೆ. ಲಾರಿಯಲ್ಲಿ ಪ್ರಯಾಣಿಸುತ್ತಿದ್ದ 20ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸಂಚಾರಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement