ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಜೆಡಿಎಸ್ ತಿರಸ್ಕರಿಸಿ

Rashmi Kasaragodu
Updated On : 13 Aug 2013, 12:44 pm

ಕ.ಪ್ರ.ವಾರ್ತ್ಣೆ ರಾಮನಗರ     ಆ.12
ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಅಪವಿತ್ರ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಅನ್ನು ತಿರಸ್ಕರಿಸಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರನ್ನು ಬೆಂಬಲಿಸುವಂತೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮರಿದೇವರು ಮತದಾರರಲ್ಲಿ ಮನವಿ ಮಾಡಿದರು.
ರಾಮನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಾರೋಹಳ್ಳಿ ಹೋಬಳಿಯ ಜಕ್ಕಸಂದ್ರ, ದ್ಯಾವಸಂದ್ರ, ಬೋಕಿಸಂದ್ರ, ಮೇಡನಹಳ್ಳಿ ಸೇರಿದಂತೆ ಇನ್ನಿತರೆ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಸಂದರ್ಭದಲ್ಲಿ ಅವರು ಮಾತನಾಡಿದರು.
ಪ್ರಸ್ತುತ ಎದುರಾಗಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಜೆಡಿಎಸ್ ಪಕ್ಷವನ್ನು ಬೆಂಬಲಿಸಿದರೆ ಪ್ರಧಾನಿಯಾಗಲು ನರೇಂದ್ರ ಮೋದಿ ಅವರನ್ನು ಬೆಂಬಲಿಸುತ್ತೇವೆ ಎಂದು ಅವರೊಡನೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಕೋಮುವಾದಿಗಳೊಂದಿಗೆ ಕೈಜೋಡಿಸಿರುವ ಜೆಡಿಎಸ್‌ಗೆ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದರು.
ಅಧಿಕಾರದ ದುರಾಸೆ: ಅಧಿಕಾರದ ದುರಾಸೆಯಿಂದ ಎಚ್.ಡಿ.ಕುಮಾರಸ್ವಾಮಿ ಅವರು ಪದೇ ಪದೇ ಚುನಾವಣೆಯನ್ನು ತಂದೊಡ್‌ಡಿದ್ದಾರೆ. ಸಾರ್ವಜನಿಕರ ತೆರಿಗೆ ಹಣವನ್ನು ಪೋಲಾಗಲು ಕಾರಣರಾಗಿದ್ದಾರೆ. ಇವರು ಕೇವಲ
ತಮ್ಮ ಕುಟುಂಬದ ಒಳಿತಿಗೋಸ್ಕರ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸ್ವಾರ್ಥ ಸಾಧನೆಗಾಗಿ ರಾಜಕಾರಣ ಮಾಡುತ್ತಿರುವವರಿಂದ ಕ್ಷೇತ್ರದ ಅಭಿವಣದ್ಧಿ ಸಾಧ್ಯವಿಲ್ಲ. ಈ ಚುನಾವಣೆಯಲ್ಲಿ ನುಡಿದಂತೆ ನಡೆವ, ಉತ್ಸಾಹಿ ಯುವಕ ಡಿ.ಕೆ.ಸುರೇಶ್ ಅವರನ್ನು ಆಶೀರ್ವದಿಸಿದಲ್ಲಿ ತಮ್ಮ ಸೇವೆಗೆ ಕಟಿಬದ್ಧರಾಗಿ ದುಡಿಯಲು ಉತ್ಸುಕರಾಗಿದ್ದಾರೆ ಎಂದು ಮರಿದೇವರು ತಿಳಿಸಿದರು.
ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ನೀಡಿದ್ದ ಆಶ್ವಾಸನೆಗಳ ಪೈಕಿ ಶೇಕಡಾ 60ರಷ್ಟನ್ನು ಈ ಬಾರಿಯ ಬಜೆಟ್‌ನಲ್ಲಿ ಪೂರೈಸಿದೆ.
 ಮುಂದಿನ 5 ವರ್ಷಗಳಲ್ಲಿ ಎಲ್ಲಾ ಆಶ್ವಾಸನೆಗಳನ್ನು ಈಡೇರಿಸಲಾಗುವುದು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಸ್. ರವಿ ತಿಳಿಸಿದರು.  ಪ್ರಚಾರ ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯೆ ಸೌಭಾಗ್ಯ ಮಂಜುನಾಥ್, ತಾ.ಪಂ. ಸದಸ್ಯೆ ಸುಮಕಂಠಿ, ಜಿ.ಪಂ. ಮಾಜಿ ಸದಸ್ಯ ನಾಗರಾಜು ಹಾಗೂ ಮುಖಂಡರಾದ ಜಗದೀಶ್ಗೌಡ, ಶೇಖರ್, ಅಶೋಕ, ನಾಗರಾಜು ಮತ್ತಿತರರು ಹಾಜರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement