ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

'ದಾನಿಗಳ ಕೊಡುಗೆ ಸದ್ಬಳಕೆ ಮಾಡಿಕೊಳ್ಳಲಿ'

Rashmi Kasaragodu
Updated On : 14 Aug 2013, 1:00 am

ಸೂಲಿಬೆಲೆ: ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ದಾನಿಗಳು ನೀಡುವ ಕೊಡುಗೆಯನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಪ್ರಗತಿಯನ್ನು ಕಾಣಬೇಕು ಎಂದು ತಾವರೆಕೆರೆ ಗ್ರಾ.ಪಂ.ಅಧ್ಯಕ್ಷ ಬಿ.ದಯಾನಂದ ಹೇಳಿದ್ದಾರೆ.
ನಂದಗುಡಿ ಹೋಬಳಿ ತಾವರೆಕೆರೆ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ವಿದ್ಯಾರ್ಥಿಗಳಿಗೆ ತಾವರೆಕೆರೆ ವೋಲ್ವೊ ಕಂಪನಿಯವರು ನೀಡಿದ ಉಚಿತ ಸಮವಸ್ತ್ರಗಳನ್ನು ವಿತರಿಸಿ ಮಾತನಾಡಿದರು.
ವೋಲ್ವೊ ಕಂಪನಿಯವರು ಪ್ರತಿವರ್ಷ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ  ವೋಲ್ವೊ ಕಂಪನಿಯವತಿಯಿಂದ ಉಚಿತ ಸಮವಸ್ತ್ರ ಹಾಗೂ ನೋಟ್ ಪುಸ್ತಕ ಹಾಗೂ ಎಸ್ಎಸ್ಎಲ್ಸಿಯಲ್ಲಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಣೆ ಮಾಡಿ ಪ್ರೋತ್ಸಾಹಿಸುತ್ತಿದ್ದಾರೆ. ಇದನ್ನು ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಪ್ರಗತಿಯನ್ನು ಹೊಂದಬೇಕು ಎಂದರು.
ಇದೇ ವೇಳೆ  ಶಾಲೆಯಲ್ಲಿ ಕ್ಷೀರ ಭಾಗ್ಯ ಯೋಜನೆಗೆ ಚಾಲನೆ ನೀಡಲಾಯಿತು. ಮುಖ್ಯ ಶಿಕ್ಷಕಿ  ಪ್ರೇಮಕುಮಾರಿ, ವೋಲ್ವೊ ಕಂಪನಿಯ ಪ್ರಧಾನ ವ್ಯವಸ್ಥಾಪಕ ಸೈರಸ್, ನಂದಗುಡಿ ಪಿಎಸ್ಐ ಪ್ರಕಾಶ್, ಎಂಜಿಯರ್ ರವಿ ಕುಲಕರ್ಣಿ, ಡಾ.ರಾಘವನ್, ಮಾರ್ಕೆಟಿಂಗ್ ಮ್ಯಾನೇನೇಜರ್ ಸುನಂದ, ರಾಜೀವ್, ಕೆಂಪಣ್ಣ ಮುಂತಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement