ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿಯಲ್ಲಿ ದಿನಾಚರಣೆ

Rashmi Kasaragodu
Updated On : 16 Aug 2013, 1:17 am

ದೇವನಹಳ್ಳಿ: ಇಲ್ಲಿನ ಲಯನ್ಸ್ ಮತ್ತು ಲಯನೆಸ್ ಸಂಸ್ಥೆ ಹಾಗೂ ಲಯನ್ಸ್ ಸೇವಾ ಪ್ರತಿಷ್ಠಾನ ಸಂಯುಕ್ತ ಆಶ್ರಯದಲ್ಲಿ 67ನೆಯ ಸ್ವಾತಂತ್ರ್ಯ ದಿನಾಚರಣೆ ಆಯೋಜಿಸಲಾಗಿತ್ತು, ಮಾಜಿ ಶಾಸಕ ಜಿ.ಚಂದ್ರಣ್ಣ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ನಮ್ಮ ದೇಶದ ಭದ್ರತೆಗೆ ದಕ್ಕೆ ತರುವಂತಹ ಕಾರ್ಯಗಳನ್ನು ಪಾಕಿಸ್ತಾನ ಮಾಡುತ್ತಿದೆ. ಅವರನ್ನು ಎದುರಿಸುವ ಧೈರ್ಯ ನಮ್ಮ ಸರ್ಕಾರಕ್ಕೆ ಇದೆ ಎಂದರಲ್ಲದೆ ಎಲ್ಲ ಭಾರತೀಯರು ಶಾಂತಿ ನೆಮ್ಮದಿ ಮತ್ತು ಗೌರವದಿಂದ ಬಾಳುವಂತಾಗಬೇಕು ಎಂದರು. ಸಂಸ್ಥೆ ಅಧ್ಯಕ್ಷ ಆರ್.ನಾಗರಾಜಯ್ಯ, ಲಯನ್ಸ್ ಸೇವಾ ಪ್ರತಿಷ್ಠಾನ ಅಧ್ಯಕ್ಷ ಕೆ.ಸಿ.ಲೋಕೇಶ್ ಉಪಸ್ಥಿತರಿದ್ದರು. ಪುಟ್ಟಪ್ಪನ ಗುಡಿ ರಸ್ತೆಯ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು ಎಂದು ಲಯನೆಸ್ ಸಂಸ್ಥೆಯ ಅಧ್ಯಕ್ಷೆ ಪದ್ಮಾವತಮ್ಮ ತಿಳಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement