ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ; ಸ್ವಾತಂತ್ರ್ಯೋತ್ಸವ

Rashmi Kasaragodu
Updated On : 16 Aug 2013, 1:17 am

ಕ.ಪ್ರ.ವಾರ್ತೆ ಟಿ ದೊಡ್ಡಬಳ್ಳಾಪುರ ಟಿ ಆ.15
ದೊಡ್ಡಬಳ್ಳಾಪುರ ನಗರ ಮತ್ತು ತಾಲೂಕಿನ ವಿವಿಧೆಡೆ 67ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗಿದೆ.
ಇಲ್ಲಿನ ತಾಲೂಕು ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಚಂದ್ರ ಧ್ವಜಾರೋಹಣ ನೆರವೇರಿಸಿದರು. ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು. ನಗರಸಭೆ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಭಾರ ಆಯುಕ್ತ ಫಿರೋಜ್ ಷೇಕ್ ಧ್ವಜಾರೋಹಣ ನೆರವೇರಿಸಿದರು. ಚುನಾಯಿತ ನಗರಸಭಾ ಸದಸ್ಯರು, ಅಧಿಕಾರಿಗಳು ಭಾಗವಹಿಸಿದ್ದರು. ತಾಲೂಕು ಪಂಚಾಯಿತಿ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಗಿದೆ.
ಕಜಾಪದಲ್ಲಿ ಧ್ವಜಾರೋಹಣ: ಇಲ್ಲಿನ ಕನ್ನಡ ಜಾಗೃತ ಪರಿಷತ್ತಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತ ರಾಜೇಂದ್ರಕುಮಾರ್ ಧ್ವಜಾರೋಹಣ ನೆರವೇರಿಸಿದರು. ಸಂಘಟನೆಗಳ ಮುಖಂಡರಾದ ಡಿ.ವಿ.ಅಶ್ವತ್ಥಪ್ಪ, ಡಿ.ಪಿ.ಆಂಜನೇಯ, ಬಿ.ಎಸ್.ಚಂದ್ರಶೇಖರ್, ತೂಬಗೆರೆ ಷರೀಫ್, ಕೆ.ಆರ್.ರವಿಕಿರಣ್, ಎಚ್.ಎಸ್.ವೆಂಕಟೇಶ್, ಗುರುರಾಜಪ್ಪ, ವಿಮಲಮ್ಮ, ಲಕ್ಷ್ಮೀ, ವಿಪ್ಲವ ರಾಜಣ್ಣ ಮತ್ತಿತರರು ಹಾಜರಿದ್ದರು.
ಜಾಲಪ್ಪ ಕಾಲೇಜು: ಇಲ್ಲಿನ ಶ್ರೀದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯ, ಆರ್.ಎಲ್.ಜಾಲಪ್ಪ ಕೈಗಾರಿಕಾ ತರಬೇತಿ ಕೇಂದ್ರ, ಶ್ರೀದೇವರಾಜ ಅರಸು ವ್ಯವಹಾರ ನಿರ್ವಹಣಾ ವಿದ್ಯಾಲಯ, ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ಮತ್ತು ಅಂತರರಾಷ್ಟ್ರೀಯ ವಸತಿ ಶಾಲೆಗಳ ನೇತೃತ್ವದಲ್ಲಿ ಜಾಲಪ್ಪ ಕಲಾಮಂದಿರ ಮೈದಾನದಲ್ಲಿ ಆಕರ್ಷಕ ಪೆರೇಡ್ ನಡೆಯಿತು.
ಸಂಸ್ಥೆಯ ಸಿಇಓ ಎಸ್.ಎಲ್.ಗಂಗಾಧರಪ್ಪ ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆಯ ಟ್ರಸ್ಟಿ ಜೆ.ರಾಜೇಂದ್ರ, ವಿವಿಧ ಶೈಕ್ಷಣಿಕ ಶಾಖೆಗಳ ಪ್ರಾಂಶುಪಾಲರು ಹಾಜರಿದ್ದರು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮಕ್ಕಳಿಂದ ಪೆರೇಡ್ ನಡೆಯಿತು. ಅತಿಥಿಗಳು ಧ್ವಜವಂದನೆ ಸ್ವೀಕರಿಸಿದರು.
ಕೊಂಗಾಡಿಯಪ್ಪ ವಿದ್ಯಾ ಸಂಸ್ಥೆ: ಇಲ್ಲಿನ ಪ್ರತಿಷ್ಠಿತ ಶ್ರೀ ಕೊಂಗಾಡಿಯಪ್ಪ ವಿದ್ಯಾ ಸಂಸ್ಥೆಯ ನರ್ಸರಿ ಮತ್ತು ಪ್ರಾಥಮಿಕ ಶಾಲೆ, ಸಂಸ್ಕೃತ ಪಾಠಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು, ಸ್ನಾತಕೋತ್ತರ ಕೇಂದ್ರಗಳ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವವನ್ನು ಸಡಗರದಿಂದ ಆಚರಿಸಲಾಯಿತು. ಆಡಳಿತ ಮಂಡಲಿ ಕಾರ್ಯದರ್ಶಿ ಅಶ್ವತ್ಥಯ್ಯ ಧ್ವಜಾರೋಹಣ ನೆರವೇರಿಸಿದರು. ಪ್ರಾಂಶುಪಾಲರುಗಳು, ಬೋಧಕವರ್ಗ ಸೇರಿದಂತೆ ಆಡಳಿತ ಮಂಡಲಿ ಅಧ್ಯಕ್ಷರು-ಪದಾಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.
ಸರ್ಕಾರಿ ಶಾಲಾಕಾಲೇಜುಗಳಲ್ಲಿ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು ಸೇರಿದಂತೆ ಹಲವೆಡೆ ಸ್ವಾತಂತ್ರ್ಯೋತ್ಸವವನ್ನು ಸಡಗರದಿಂದ ಆಚರಿಸಲಾಗಿದೆ. ಗ್ರಾಮಾಂತರ ಪ್ರದೇಶದ ತೂಬಗೆರೆ, ಸಾಸಲು, ದೊಡ್‌ಡಬೆಳವಂಗಲ, ಹಣಬೆ, ರಾಜಘಟ್ಟ, ಹುಲಿಕುಂಟೆ, ಬಾಶೆಟ್ಟಿಹಳ್ಳಿ, ಕನಸವಾಡಿ ಮತ್ತಿತರ ಗ್ರಾಮಗಳ ಸರ್ಕಾರಿ ಶಾಲಾ ಕಾಲೇಜುಗಳಲ್ಲಿಯೂ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದೆ.
ಸರಸ್ವತಿ ಶಾಲೆ: ಇಲ್ಲಿನ ಸರಸ್ವತಿ ಶಾಲೆಯಲ್ಲಿ 67ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ನಗರಸಭೆ ಸದಸ್ಯ ಡಿ.ಎಂ.ಚಂದ್ರಶೇಖರ್ ಧ್ವಜಾರೋಹಣ ನೆರವೇರಿಸಿದರು.
ಸಂಸ್ಥೆಯ ಅಧ್ಯಕ್ಷ ಎ.ಸುಬ್ರಹ್ಮಣ್ಯ, ಕಾರ್ಯದರ್ಶಿ ಮಂಜುಳಾ, ಮುಖ್ಯಶಿಕ್ಷಕ ಬಿ.ಕೆ.ಸಂಪತ್‌ಕುಮಾರ್ ಮತ್ತಿತರರು ಭಾಗವಹಿಸಿದ್ದರು. ಮಕ್ಕಳಿಂದ ದೇಶಭಕ್ತಿಗೀತೆ ಗಾಯನ, ದೇಶಭಕ್ತರ ವೇಷಭೂಷಣ ಪ್ರದರ್ಶನ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement