ನೇತಾಜಿ ಪಾಪ್ಯುಲರ್ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ
ರಾಮನಗರ: ನಗರದ ನೇತಾಜಿ ಪಾಪ್ಯುಲರ್ ಶಾಲೆಯಲ್ಲಿ 67ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಶಾಲೆಯ ಅಧ್ಯಕ್ಷ ಕೆ.ಗುರುವೇಗೌಡ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಾತೃಭೂಮಿ, ರಾಷ್ಟ್ರ ಧ್ವಜ ಹಾಗೂ ರಾಷ್ಟ್ರಗೀತೆಗೆ ಗೌರವ ಸಲ್ಲಿಸಬೇಕು. ಸ್ವಾತಂತ್ರ್ಯ ತಂದುಕೊಡಲು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಹುತಾತ್ಮರನ್ನು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದರು. ಜಾತಿ, ಭಾಷೆ ಹೆಸರಿನಲ್ಲಿ ಪರಸ್ಪರ ಕಚ್ಚಾಟವನ್ನು ಬಿಟ್ಟು ಭಾರತೀಯರಾದ ನಾವೆಲ್ಲರೂ ಒಂದೇ ಎಂಬ ಭಾವನೆ ಬೆಳೆಸಿಕೊಳ್ಳಬೇಕು.ಎಂದು ಗುರುವೇಗೌಡ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸಮಾರಂಭದಲ್ಲಿ ಕೆ.ವೀರೇಗೌಡ, ಸ್ವಾತಂತ್ರ್ಯ ಹೋರಾಟಗಾರ ವೆಂಕಟೇಶಯ್ಯ, ಪಶುವೈದ್ಯ ಪರಿವೀಕ್ಷಕ ಬಸವರಾಜು, ರಾಜಶೇಖರಯ್ಯ, ಚಾಮಶೆಟ್ಟಿ ಶಾಲೆಯ ಶಿಕ್ಷಕರು ಹಾಜರಿದ್ದರು.