ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಪರ ಎ. ಮಂಜು ಪ್ರಚಾರ

Rashmi Kasaragodu
Updated On : 17 Aug 2013, 1:12 am

ಕ.ಪ್ರ.ವಾರ್ತೆ,ಮಾಗಡಿ,ಆ.16
ಕ್ಷೇತ್ರದ ಬಗ್ಗೆ ಅಪಾರವಾದ ಕಾಳಜಿ ಇರುವ ಶಾಸಕ ಎಚ್.ಸಿ. ಬಾಲಕೃಷ್ಣ ಅವರು, ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸುವ ಮೂಲಕ ಹೇಮಾವತಿ ನದಿ ನೀರನ್ನು ಮಾಗಡಿ ಕ್ಷೇತ್ರಕ್ಕೆ ಹರಿಸಲು ಕೈಜೋಡಿಸುವಂತೆ ಕೆಪಿಸಿಸಿ ಸದಸ್ಯ ಎ.ಮಂಜು ಮನವಿ ಮಾಡಿದರು.
 ಅವರು ಮಾಗಡಿ ಪಟ್ಟಣದ ತಿರುಮಲೆಯಲ್ಲಿ ಲೋಕಸಭಾ ಕಾಂಗ್ರೆಸ್  ಅಭ್ಯರ್ಥಿ ಡಿ.ಕೆ. ಸುರೇಶ್ ಪರ ಮತದಾರರ ಮನೆ ಮನೆಗೆ ತೆರಳಿ ಮತಯಾಚಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ನಾಲ್ಕು ಬಾರಿ ಗೆದ್ದಿರುವ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಅರಿವಿದೆ. ಆದರೆ ವಿರೋಧ ಪಕ್ಷದಲ್ಲಿ ಕುಳಿತು ಕ್ಷೇತ್ರಕ್ಕೆ ಹೇಮಾವತಿ ನದಿ ನೀರು ಹರಿಸಲು ಅಸಾಧ್ಯ, ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿದೆ. ಜೆಡಿಎಸ್  ಶಾಸಕರಾಗಿರುವ ಬಾಲಕೃಷ್ಣ ಅವರು ಕ್ಷೇತ್ರದ ಜನತೆಯ ಹಾಗೂ ಕ್ಷೇತ್ರದ ಬಗ್ಗೆ ಅಪಾರವಾದ ಕಾಳಜಿ ಉಳ್ಳವರಾಗಿದ್ದಾರೆ. ಕ್ಷೇತ್ರ ಮತ್ತು ಕ್ಷೇತ್ರದ ಜನರ ಹಾಗು ರೈತರ ಹಿತದೃಷ್ಟಿಯಿಂದ ಹೇಮಾವತಿ ನದಿ ನೀರು ಕ್ಷೇತ್ರಕ್ಕೆ ಹರಿಸಲು ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಬೇಕಿದೆ ಎಂದರು   ಪುರಸಭಾ ಸದಸ್ಯರಾದ ಎಸ್.ಮಹದೇವ್, ನರಸಿಂಹಮೂರ್ತಿ, ಎಂ.ಬಿ. ಮಹೇಶ್, ಶಿವಕುಮಾರ್, ಮಾಜಿ ಅಧ್ಯಕ್ಷ ರಂಗಹನುಮಯ್ಯ, ಪಿ.ವಿ. ಸೀತಾರಾಂ, ಪುಟ್ಟಶಂಕರಪ್ಪ, ನಾಗರಾಜು, ಎಂ.ಎನ್.ಮಂಜುನಾಥ್,ಪುರುಷೋತ್ತಮ್  ಇತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement