ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ
ಮಾಗಡಿ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರನ್ನು ಗೆಲ್ಲಿಸಬೇಕು ಎಂಬುದೇ ನಮ್ಮ ಮುಂದಿರುವ ಗುರಿ ಎಂದು ಕಾಂಗ್ರೆಸ್ ಮುಖಂಡ ಬಿ.ವಿ. ಜಯರಾಮು ಹೇಳಿದರು.
ತಾಲೂಕಿನ ನೇತೇನಹಳ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಪರ ಮತಯಾಚಿಸಿ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಅಡಳಿತವಿದೆ. ಡಿ.ಕೆ.ಸುರೇಶ್ ಅವರನ್ನು ಲೋಕಸಭೆಗೆ ಅಧಿಕ ಮತದಿಂದ ಕಳಿಸಿಕೊಟ್ಟರೆ ತಾಲೂಕಿಗೆ ಹೇಮಾವತಿ ನದಿ ಹರಿಸಲು ಸಾಧ್ಯವಾಗುತ್ತದೆ.
ಈ ನಿಟ್ಟಿನಲ್ಲಿ ಮತದಾರರು ಹೆಚ್ಚು ಮತ ನೀಡುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರನ್ನು ಗೆಲ್ಲಿಸೋಣ. ಕಾಂಗ್ರೆಸ್ಗೆ ಶಕ್ತಿ ತುಂಬೋಣ ಎಂದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ದಶರಧ, ಮಂಚನಬೆಲೆ ಕುಮಾರ್ ಇತರರು ಮಾತನಾಡಿದರು.