ಜೆಡಿಎಸ್ ಮೈತ್ರಿಯಿಂದ ಕೋಮುವಾದಕ್ಕೆ ಪುಷ್ಟಿ: ಟೀಕೆ
ರಾಮನಗರ: ಬಿಜೆಪಿ, ಕೆಜೆಪಿ ಜತೆ ಅಪವಿತ್ರ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಪಕ್ಷವು ಅವಕಾಶವಾದಿ ರಾಜಕಾರಣ ಮಾಡುತ್ತಿದೆ. ಈ ಮೈತ್ರಿ ಕೋಮುವಾದಕ್ಕೆ ಪುಷ್ಟಿ ನೀಡಿದಂತಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡ ಜಿ.ಎ. ಲಕ್ಷ್ಮೀನಾರಾಯಣ ಗೌಡ ಆಪಾದಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮನಯ್ಯ ಅವರು ರೈತಪರ ಚಿಂತಕರಾಗಿರುವುದರಿಂದ ಅವರ ಕೈಬಲಪಡಿಸಲು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವ ನಿರ್ಧಾರಕ್ಕೆ ಬಂದಿರುವುದಾಗಿ ನಗರದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಸಂಬಂಧ ಕೃಷಿ ಬೆಲೆ ನಿಗದಿ ಆಯೋಗ ರಚನೆಗೆ ಸಿದ್ದರಾಮಯ್ಯ ಕ್ರಮ ಕೈಗೊಂಡಿದ್ದಾರೆ. ಅಕ್ರಮ-ಸಕ್ರಮ ಯೋಜನೆಯಡಿ ರೈತರ ಪಂಪ್‌ಸೆಟ್‌ಗಳ ಸರ್ವೆ ನಡೆಸಿ, ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುತ್ತಿದೆ ಹಾಗೂ ಸೌರಶಕ್ತಿಯಿಂದ ವಿದ್ಯುತ್ ಉತ್ಪಾದನೆಗೆ ಸಹಾಯಧನ ನೀಡಲು ನಿರ್ಧರಿಸಿರುವುದು ರೈತ ಸಮುದಾಯ ಸ್ವಾಗತಿಸುತ್ತದೆ ಎಂದರು.
ಜಿಲ್ಲೆಯಲ್ಲಿ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ಡಾ. ಪರಮಶಿವಯ್ಯ ವರದಿಯನ್ನು ಅನುಷ್ಠಾನಗೊಳಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ತೋರಿರುವುದರಿಂದ ಕಾಂಗ್ರೆಸ್‌ಅನ್ನು ಬೆಂಬಲಿಸುತ್ತಿರುವುದಾಗಿ ಸ್ಪಷ್ಟಪಡಿಸಿದರು.
ಮುನಿರಾಜು, ಲಿಂಗೇಗೌಡ, ಶ್ರೀನಿವಾಸ್, ಸಿದ್ದರಾಜು, ಶೇಖರ್, ರಮೇಶ್, ಪಾತಯ್ಯ, ಗೋವಿಂದಯ್ಯ, ಚೂಡೇಗೌಡ, ಮಹದೇವ, ತಿಮ್ಮಯ್ಯ ಮುಂತಾದವರು ಹಾಜರಿದ್ದರು.