ಟ್ಯಾಂಕರ್ ಮೂಲಕ ನೀರು ಸರಬರಾಜು: ಮುಖ್ಯಾಧಿಕಾರಿ
ದೇವನಹಳ್ಳಿ: ಕೊಡ ನೀರಿಗೆ 3 ರಂತೆ ಮಾರಾಟವಾಗುತ್ತಿರುವ ಬಗ್ಗೆ ಕನ್ನಡಪ್ರಭ ಪತ್ರಿಕೆಯಲ್ಲಿ ವರದಿಯಾಗಿರುವ ಬಗ್ಗೆ ಪುರಸಭಾ ಮುಖ್ಯಾಧಿಕಾರಿ ಮಂಜುನಾಥ್ ಅವರು ಪ್ರತಿಕ್ರಿಯಿಸಿ ಪುರಸಭೆ ವ್ಯಾಪ್ತಿಗೆ ಸೇರಿದ ಎಲ್ಲ 23 ವಾರ್ಡ್‌ಗಳಿಗೆ ನಿಗದಿತ ಸಮಯಕ್ಕೆ ಕುಡಿಯುವ ನೀರನ್ನು ಪೈಪ್‌ಲೈನ್ ಮೂಲಕ ಹಾಗೂ ಟ್ಯಾಂಕರ್‌ಗಳ ಮೂಲಕ ಸರಬರಾಜು ಮಾಡಲಾಗುತ್ತಿದೆ ಎಂದರು.ಇತ್ತೀಚಿನ ದಿನಗಳಲ್ಲಿ ವಿದ್ಯುತ್ ಕೊರತೆಯಿಂದಾಗಿ ಕುಡಿಯುವ ನೀರು ಸರಬರಾಜು ಮಾಡುವಲ್ಲಿ ತೊಂದರೆಯಾಗಿದೆ ಎಂದು ಮುಖ್ಯಾಧಿಕಾರಿಗಳು ತಿಳಿಸಿ ಪಟ್ಟಣದ ಯಾವುದೇ ಭಾಗದಿಂದ ಕುಡಿಯುವ ನೀರಿನ ತೊಂದರೆ ಇದ್ದ ಬಗ್ಗೆ ಪುರಸಭೆಗೆ ದೂರು ನೀಡಿದ ಕ್ಷಣದಲ್ಲಿಯೇ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲಾಗುವುದು ಎಂದು ತಿಳಿಸಿದರು. ನಾಗರಿಕರು ಮೊ. 98451825575, 9845420010 ಸಂಪರ್ಕಿಸಬೇಕೆಂದು ಕೋರಲಾಗಿದೆ.