ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ
ದೊಡ್ಡಬಳ್ಳಾಪುರ: ತಾಲೂಕಿನ ಅರಳುಮಲ್ಲಿಗೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ 2012- 13ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಗ್ರಾಮಸ್ಥ ಮತ್ತು ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಆರ್. ಗೋವಿಂದರಾಜು ನಗದು ಬಹುಮಾನ ಮತ್ತು ನೆನಪಿನ ಕಾಣಿಕೆ ನೀಡಿ ಪುರಸ್ಕರಿಸಿದರು. ಮುಖ್ಯ ಶಿಕ್ಷಕಿ ಶಾಂತಲಾ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಪಿ.ಜಿ. ಸುಬ್ಬರಾವ್ ಉಪಸ್ಥಿತರಿದ್ದರು. ಅಭಿಷೇಕ್, ಕರಿಬಸಮ್ಮ ಮತ್ತು ಉಷಾ ಪ್ರತಿಭಾ ಪುರಸ್ಕಾರ ಪಡೆದರು.