ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಾಳೆ
ದೊಡ್ಡಬಳ್ಳಾಪುರ: ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ನೇತೃತ್ವದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಕ್ರಾಂತಿಕಾರಿ ಚಂದ್ರಶೇಖರ್ ಆಜಾದ್ ಸವಿನೆನಪಿನಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆ.19ರ ಸೋಮವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕನ್ನಡ ಜಾಗೃತ ಭವನದಲ್ಲಿ ಏರ್ಪಡಿಸಲಾಗಿದೆ.ಇದೇ ಸಂದರ್ಭದಲ್ಲಿ ಪಕ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಕೂಡ ಆಯೋಜಿಸಲಾಗಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.