ಕಾಂಗ್ರೆಸ್ ಗೆಲವು ಖಚಿತ: ಪುಟ್ಟಸ್ವಾಮಿ
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಗಣನೀಯ ಸಂಖ್ಯೆಯಲ್ಲಿರುವ ಕುರುಬ ಸಮುದಾಯ ಕಾಂಗ್ರೆಸ್ ಪರ ಮತ ಚಲಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಬಲಪಡಿಸಲಿದೆ ಎಂದು ಕಾಂಗ್ರೆಸ್ ಮುಖಂಡ, ನಿವೃತ್ತ ಐಎಎಸ್ ಅಧಿಕಾರಿ ಎಸ್.ಪುಟ್ಟಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಮನಗರ ಜಿಲ್ಲೆಯಲ್ಲಿ 65 ಸಾವಿರ ಸೇರಿದಂತೆ ಇಡೀ ಕ್ಷೇತ್ರದಲ್ಲಿ 2.50 ಲಕ್ಷ ಕುರುಬ ಮತದಾರರಿದ್ದಾರೆ. ಸಮುದಾಯದ ಪ್ರತಿನಿಧಿಯಾಗಿ ತಾವು ಎಲ್ಲೆಡೆ ಪ್ರಚಾರ ನಡೆಸಿ, ಕಾಂಗ್ರೆಸ್ ಪರ ಮತ ಯಾಚನೆ ನಡೆಸಿರುವೆ ಎಂದು ಅವರು ನಗರದ ಜಾನಪದ ಲೋಕದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅನುದಾನ ಬಳಕೆಯಿಲ:್ಲ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಸಂಸದರ ಅನುದಾನ ಸದ್ಬಳಕೆ ಆಗಿಲ್ಲ. ತಾವು ಇಲ್ಲಿ ಜಿಲ್ಲಾಧಿಕಾರಿ ಆಗಿದ್ದಾಗ ಸಂಸದರ ಅನುದಾನದ ಹಂಚಿಕೆ ಮತ್ತು ಕಾಮಗಾರಿ ಅನುಷ್ಠಾನ ಪರಿಶೀಲನಾ ಸಭೆ ನಡೆಸಲು ಕೋರಿದರೂ ಕುಮಾರಸ್ವಾಮಿ ಬರಲಿಲ್ಲ ಎಂದು ಪುಟ್ಟಸ್ವಾಮಿ ಆರೋಪಿಸಿದರು.
ಮುಖಂಡರ ಸಭೆ: ಜಾನಪದ ಲೋಕದಲ್ಲಿ ಎಸ್.ಪುಟ್ಟಸ್ವಾಮಿ ಅವರು ರಾಮನಗರ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುರುಬ ಸಮುದಾಯದ ಮುಖಂಡರ ಸಭೆ ನಡೆಸಿ, ಚುನಾವಣೆ ಕುರಿತು ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡ ಮರಿದೇವರು ಮತ್ತಿತರರು ಹಾಜರಿದ್ದರು.