ಚಂದ್ರಮೌಳೇಶ್ವರ ಬ್ರಹ್ಮ ರಥೋತ್ಸವ
ದೊಡ್ಡಬಳ್ಳಾಪುರ: ಇಲ್ಲಿನ ತೇರಿನಬೀದಿಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀಚಂದ್ರಮೌಳೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಡಿ.2ರಂದು ಸೋಮವಾರ ವಿಜೃಂಭಣೆಯಿಂದ ನಡೆಯಲಿದೆ.ರಥೋತ್ಸವ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಶನಿವಾರ ಸಂಜೆ ಕಲ್ಯಾಣೋತ್ಸವ ವೈಭವದಿಂದ ನಡೆದಿದೆ. 5 ಅಂತಸ್ತಿನ ಭವ್ಯ ತೇರನಲ್ಲಿ ರಥೋತ್ಸವ ನಡೆಯಲಿದ್ದು, ಪಾರಂಪರಿಕ ಮತ್ತು ಐತಿಹಾಸಿಕ ಮಹತ್ವ ಹೊಂದಿದೆ. ಮುಜರಾಯಿ ಇಲಾಖೆಗೆ ಸೇರಿರುವ ದೇವಾಲಯದ ಬ್ರಹ್ಮರಥೋತ್ಸವ ಕಾರ್ಯಕ್ರಮ ಸರ್ಕಾರದಿಂದ ನಡೆಯಲಿದ್ದು, ನಂತರ ಜಾತ್ರೆ ಮತ್ತು ಹಗಲು ಪರಿಷೆ ನಡೆಯಲಿವೆ.