ಹಕ್ಕಿಪಿಕ್ಕಿ ಶಾಲೆಯಲ್ಲಿ ಪ್ರತಿಭಾ ಕಾರಂಜಿ
ರಾಮನಗರ: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಿ, ಪ್ರತಿಭಾವಂತ ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಂಡರ್ ಲಾ ಹಾಲಿಡೇಸ್ ಲಿಮಿಟೆಡ್ ಸಂಸ್ಥೆಯ ಸಹಯೋಗದೊಂದಿಗೆ ಶಿಕ್ಷಣ ಇಲಾಖೆಯು ತಾಲೂಕಿನ ಹಕ್ಕಿಪಿಕ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ವಂಡರ್ ಲಾದ ಹಿರಿಯ ವ್ಯವಸ್ಥಾಪಕ ಎಂ. ಶಿವದಾಸ್ ಮಾತನಾಡಿ, ಶಾಲಾ ಮಕ್ಕಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ಭಾಗವಹಿಸಬೇಕು.