ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಮೋದಿ ಪ್ರಧಾನಿ ಸ್ಥಾನಕ್ಕೆ ಅರ್ಹರಲ್ಲ: ಮಾವಳ್ಳಿ ಶಂಕರ್

Rashmi Kasaragodu
Updated On : 5 Dec 2013, 1:33 am

ಆನೇಕಲ್ಲು: ಗುಜರಾತಿನ ಮುಖ್ಯಮಂತ್ರಿ ನರೇಂದ್ರ ಮೋದಿಯವರು ಈ ದೇಶದ ಪ್ರಧಾನಿಯಾಗಲು ಯಾವುದೇ ಆರ್ಹತೆ ಹೊಂದಿಲ್ಲ. ಪ್ರಚಾರ ಹಾಗೂ ಪ್ರಚೋದಿತ ಭಾಷಣಕಾರ ದೇಶ ಮುನ್ನಡೆಸುವ ನಾವಿಕನಾಗುವುದಿಲ್ಲ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಹೇಳಿದ್ದಾರೆ.
ಅವರು ಆನೇಕಲ್ ತಾಲೂಕು ಘಟಕದ ಕಾರ್ಯಕರ್ತರು ಹಮ್ಮಿಕೊಂಡಿದ್ದ ಮೋದಿ ಹಠಾವ್  ಭಾರತ್ ಬಚಾವ್ ಆಂದೋಲನದಲ್ಲಿ ಪಾಲ್ಗೊಂಡು ಮಾತನಾಡಿದರು. ಜಿಲ್ಲಾ ಸಂಚಾಲಕ ಗೋವಿಂದರಾಜು ಮಾತನಾಡಿದರು. ತಾಲೂಕು ಸಂಚಾಲಕ ಸುರೇಶ್ ಪೋತ ಮಾತನಾಡಿದರು. ಪ್ರತಿಭಟನಾ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯ ಕಾರ್ಯಕರ್ತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಮೋದಿ ವಿರುದ್ಧ ಘೋಷಣೆ ಕೂಗಿದರು. ನಂತರ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement