ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ರಾಜ್ಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ದೊಡ್ಡಬಳ್ಳಾಪುರದ ವಿದ್ಯಾರ್ಥಿಗಳು

Rashmi Kasaragodu
Updated On : 5 Dec 2013, 1:33 am

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದ ಸ್ವಾಮಿ ವಿವೇಕಾನಂದ ಆಂಗ್ಲ ಪ್ರೌಢಶಾಲೆ ಮತ್ತು ಎಂಎಬಿಎಲ್ ಪ್ರೌಢಶಾಲೆಗಳ ವಿದ್ಯಾರ್ಥಿಗಳು ವಿಭಾಗೀಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿ ವಿವಿಧ ವಿಚಾರಗಳಿಗೆ ಸಂಬಂಧಿಸಿದ ವಸ್ತು ಪ್ರದರ್ಶನಗಳನ್ನು ಗಣನೀಯ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಂತದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಗ್ರೀನ್ ಕೆಮಿಸ್ಟ್ರಿ ವಿಚಾರದಲ್ಲಿ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿದ್ದ ಎಂಎಬಿಎಲ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದ್ದಾರೆ. ಅದೇ ರೀತಿ ಸಂಪನ್ಮೂಲಗಳು ವಿಚಾರದಲ್ಲಿ ಸ್ವಾಮಿ ವಿವೇಕಾನಂದ ಆಂಗ್ಲ ಪ್ರೌಢಶಾಲೆಯ ವತಿಯಿಂದ ಪ್ರದರ್ಶನದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಕೂಡ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟವನ್ನು ಪ್ರತಿನಿಧಿಸಲಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಲಿ, ಬೋಧಕರು ಅಭಿನಂದಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement