ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
ಮೂಡಿಗೆರೆ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಸರ್ಕಾರಿ ಶಾಲೆಗಳಲ್ಲಿ ನಡೆಯುವ ಪ್ರತಿಭಾ ಕಾರಂಜಿ ಉತ್ತಮ ಕಾರ್ಯಕ್ರಮ ಎಂದು ಜಿಪಂ ಸದಸ್ಯೆ ಜ್ಯೋತಿ ಹೇಮಶೇಖರ್ ತಿಳಿಸಿದರು.
ತಾಲೂಕಿನ ಕೋಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳಿಕೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿ, ಆಂಗ್ಲ ಭಾಷೆ ವ್ಯಾಮೋಹದಿಂದ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುತ್ತಿರುವುದರಿಂದ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದೆ ಎಂದರು. ಹಳಿಕೆ ಗ್ರಾಪಂ ಅಧ್ಯಕ್ಷ ವಸಂತ್ ಕೆ.ಎಸ್. ಮಾತನಾಡಿ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಮಕ್ಕಳಲ್ಲಿ ಯಾವ ಪ್ರತಿಭೆ ಅಡಗಿದೆ ಎಂಬುದು ಯಾರಿಗೂ ತಿಳಿದಿರುವುದಿಲ್ಲ. ಗ್ರಾಮೀಣ ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ ಎಂದರು. ಗ್ರಾಪಂ ಸದಸ್ಯರಾದ ಜಾಕೀರ್, ದೀಪ್ತಿ ನಂದೀಶ್, ವಸಂತ್, ಕ್ಷೇತ್ರ ಸಮನ್ವಯಾಧಿಕಾರಿ ಎಚ್.ಕೆ. ತಾರನಾಥ್, ಅಕ್ಷರ ದಾಸೊಹದ ಟಿ.ಆರ್. ರುದ್ರಪ್ಪ, ಸಂಪನ್ಮೂಲ ವ್ಯಕ್ತಿಗಳಾದ ಕೆಂಪೇಗೌಡ, ರಿಯಾಜ್ ಅಹ್ಮದ್, ಸಿಆರ್ಪಿ ಸಿದ್ದಪ್ಪ ಶೆಟ್ಟಿ, ಶಿಕ್ಷಕ ಕುಮಾರ್ ಎಂ.ಎಚ್. ಉಪಸ್ಥಿತರಿದ್ದರು.