ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಬೈಕ್ ಕಳವು ಆರೋಪಿ ಸೆರೆ

Rashmi Kasaragodu
Updated On : 7 Dec 2013, 12:45 pm

ಚನ್ನಪಟ್ಟಣ: ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿದ ಗ್ರಾಮಾಂತರ ಠಾಣೆ ಪೊಲೀಸರು, ಆತನಿಂದ 5 ಮೋಟಾರ್ ಬೈಕ್‌ಗಳನ್ನು ವಶಪಡಿಸಿ ಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಇಲ್ಲಿನ ಕೆಂಗಲ್ ಸಮೀಪ ವಾಹನಗಳ ತಪಾಸಣಾ ಕಾರ್ಯ ನಡೆಸುತ್ತಿದ್ದ ಗ್ರಾಮಾಂತರ ಪಿಎಸ್‌ಐ ವೆಂಕಟೇಶ್ ಮತ್ತು ಸಿಬ್ಬಂದಿ ಅನುಮಾನಸ್ಪದವಾಗಿ ಕಣ್ವ ರಸ್ತೆಯತ್ತ ಹೋಗುತ್ತಿದ್ದ ಕನಕಪುರ ತಾಲೂಕು ಯಡಮಾರನಹಳ್ಳಿಯ ಶಿವಕುಮಾರ್(28) ಎಂಬಾನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಆತ ಜಿಲ್ಲೆಯತ ವಿವಿಧೆಡೆ ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ.  ಆರೋಪಿ ಕಳವು ಮಾಡಿದ್ದ ಬೈಕ್‌ಗಳನ್ನು ವಶಪಡಿಸಿ ಕೊಂಡಿರುವ ಪೊಲೀಸರು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement