ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ರೈತರಿಂದ ಅರ್ಜಿ ಆಹ್ವಾನ

Rashmi Kasaragodu
Updated On : 7 Dec 2013, 12:51 pm

ರಾಮನಗರ: ಪಶು ಸಂಗೋಪನಾ ಇಲಾಖೆಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ವಿವಿಧ ಸಾಮರ್ಥ್ಯದ ಮೇವು ಕತ್ತರಿಸುವ ಯಂತ್ರಗಳನ್ನು ಉಚಿತವಾಗಿ ನೀಡಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಾನುವಾರುಗಳನ್ನು ಹೊಂದಿದ್ದು, ಮೇವಿನ ಬೆಳೆಯನ್ನು ಬೆಳೆಸುತ್ತಿರುವ ರೈತರು ಈ ಯೋಜನೆಗೆ ಅರ್ಹರಿರುತ್ತಾರೆ. ಅರ್ಜಿಯನ್ನು ಉಪ ನಿರ್ದೇಶಕರ ಕಚೇರಿ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿ.14 ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ತಾಲೂಕು ಪಶು ಆಸ್ಪತ್ರೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯಾ ಸೇವಾ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ವಿವಿಧ ಸ್ಪರ್ಧೆ
ರಾಮನಗರ: ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯಿಂದ 2013-14ನೇ ಸಾಲಿನ ರಾಜ್ಯ ಮಟ್ಟದ ಯುವ ಜನೋತ್ಸವದಲ್ಲಿ ಭಾಗವಹಿಸುವ ಜಿಲ್ಲೆಯ ತಂಡವನ್ನು ಆಯ್ಕೆ ಮಾಡಲು ಡಿ.12ರಂದು ನಗರದ ಗುರುಭವನದಲ್ಲಿ ವಿವಿಧ ಸ್ಪರ್ಧೆಗಳನ್ನು ನಡೆಸಲಾಗುವುದು. ರಾಮನಗರ ಜಿಲ್ಲೆಗೆ ಸೇರಿದ 15 ರಿಂದ 35 ವರ್ಷದೊಳಗಿನ ಎಲ್ಲಾ ಯುವ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಜಾನಪದ ನೃತ್ಯ, ಏಕಾಂಕ ನಾಟಕ, ಹಿಂದೂಸ್ಥಾನಿ ಶಾಸ್ತ್ರೀಯ ಗಾಯನ, ಕರ್ನಾಟಕ ಶಾಸ್ತ್ರೀಯ ಗಾಯನ, ಶಾಸ್ತ್ರೀಯ ವಾದ್ಯ (ಸಿತಾರ್, ತಬಲಾ, ಕೊಳಲು, ವೀಣೆ, ಮೃದಂಗ) ಶಾಸ್ತ್ರೀಯ ನೃತ್ಯ(ಭರತನಾಟ್ಯ, ಒಡಿಸ್ಸಿ, ಮಣಿಪುರಿ ಕೂಚುಪುಡಿ, ಕಥಕ್), ಗಿಟಾರ್, ಹಾರ್ಮೋನಿಯಂ ಮತ್ತು ಆಶು ಭಾಷಣ ಸ್ಪರ್ಧೆ ನಡೆಸಲಾಗುವುದು.  ಈ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆಯುವ ಕಲಾವಿದರು ಡಿ.14 ರಂದು ಮಂಡ್ಯ ಜಿಲ್ಲೆಯ ಕೀಲಾರದಲ್ಲಿ ನಡೆಯುವ ರಾಜ್ಯ ಮಟ್ಟದ ಯುವ ಜನೋತ್ಸವದಲ್ಲಿ ಭಾಗವಹಿಸಲು ಅರ್ಹರು. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ರಾಮನಗರ ಜಿಲ್ಲೆ ಇವರನ್ನು ಖುದ್ದಾಗಿ ಅಥವಾ ದೂ-080-27274655 ಸಂಪರ್ಕಿಸಬಹುದು.
ವಿಜ್ಞಾನ ಸಮ್ಮೇಳನ
ರಾಮನಗರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ 6ನೇ ವಾರ್ಷಿಕ ಸಮ್ಮೇಳನವು ಬೆಂಗಳೂರಿನ ಕ್ರೈಸ್ಟ್ ವಿಶ್ವ ವಿದ್ಯಾನಿಲಯದ ಸಹಯೋಗದೊಂದಿಗೆ ಡಿ.20, 21ರಂದು ಅವಿಷ್ಕಾರಕ ಸಂಶೋಧನೆ ಮತ್ತು ಅಭಿವೃದ್ಧಿ ಉತ್ತೇಜನಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ ಎಂಬ ವಿಷಯದಡಿ ನಡೆಯಲಿದೆ. ಸಂಶೋಧನಾ ಪ್ರಾತ್ಯಕ್ಷಿಕೆಗಳ ಸಾರಾಂಶವನ್ನು ಕಳುಹಿಸುವ ದಿನಾಂಕವನ್ನು ಡಿ.9ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ವಿಶೇಷ ನಿರ್ದೇಶಕ ಎಚ್.ಹೊನ್ನೇಗೌಡ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement