ಶ್ರೀಕಂಠದತ್ತ ಒಡೆಯರ್‌ಗೆ ನುಡಿ ನಮನ
ವಿಜಯಪುರ: ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ರಾಜಕೀಯ, ಧಾರ್ಮಿಕ, ಶೈಕ್ಷಣಿಕ, ಕ್ಷೇತ್ರಗಳಲ್ಲಿ ಜನಮೆಚ್ಚುವಂತಹ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದರು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಸಾಪ ಅಧ್ಯಕ್ಷ ಹುಲಿಕಲ್ ನಟರಾಜ್ ತಿಳಿಸಿದರು.
ಅವರು ಪಟ್ಟಣದ ಕಸಾಪ ಕಚೇರಿಯಲ್ಲಿ ಯದುವಂಶದ ಮಹಾರಾಜ ಶ್ರೀಕಂಠದತ್ತ ಒಡೆಯರ್ ಅವರಿಗೆ ಏರ್ಪಡಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮೈಸೂರು ಸಂಸ್ಥಾನವನ್ನು ದೇಶದಲ್ಲೇ ಮಾದರಿ ಸಂಸ್ಥಾನವನ್ನಾಗಿ ರೂಪಿಸುವಲ್ಲಿ ಒಡೆಯರ್ ಕುಟುಂಬದ ಕೊಡುಗೆ ಸ್ಮರಣೀಯ,ನೀರಾವರಿ, ಕೃಷಿ, ಮೂಲಭೂತ ಸೌಕರ್ಯಗಳೂ ಸೇರಿದಂತೆ ಕಲೆ, ಸಾಹಿತ್ಯ, ಸಂಸ್ಕೃತಿ ವಿಚಾರಗಳಲ್ಲೂ ಅವರು ಗಮನ ಸೆಳೆದಿದ್ದರು ಎಂದರು.
ಜಿಲ್ಲಾ ಕಸಾಪ ಉಪಾಧ್ಯಕ್ಷ ಎಚ್.ಎಸ್. ರುದ್ರೇಶ್ ಮೂರ್ತಿ ಮಾತನಾಡಿ ನಾಲ್ವಡಿ ಕೃಷ್ಣ ರಾಜ ಒಡೆಯರ್ ಅವರ ಆಳ್ವಿಕೆಯಲ್ಲಿ ಮೈಸೂರು ರಾಜ್ಯಾದ್ಯಂತ ಕೆಲವು ನಗರಗಳು ಹಳ್ಳಿ ಹಳ್ಳಿಗೂ ಭೇಟಿ ನೀಡಿ ಸಾಮಾನ್ಯ ಜನರ ಕಷ್ಟಗಳನ್ನು ಅರಿತು ಹಲವಾರು ಯೋಜನೆಗಳನ್ನು ಜಾರಿಗೆ ತಂದರು ಎಂದರು.
ದೇವನಹಳ್ಳಿ ತಾಲೂಕು ಕಸಾಪ ಅಧ್ಯಕ್ಷ ಎನ್. ರಾಜ್‌ಗೋಪಾಲ್, ಟೌನ್ ಕಸಾಪ ಅಧ್ಯಕ್ಷ ಜೆ.ಆರ್. ಮುನಿವೀರಣ್ಣ, ಶಿಕ್ಷಕ ಚಂದ್ರಶೇಖರ್ ಹಡಪದ್, ವಿ.ಎನ್.ರಮೇಶ್, ನಿಕಟಪೂರ್ವ ಅಧ್ಯಕ್ಷ ಚಿ.ಮಾ.ಸುಧಾಕರ್, ಟೌನ್ ಬಿಜೆಪಿ ಅಧ್ಯಕ್ಷ ಕನಕರಾಜು, ನಾರಾಯಣಸ್ವಾಮಿ ಮತ್ತಿತರರು ಭಾಗವಹಿಸಿದ್ದರು.