ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ನೂತನ ಹೈಟೆಕ್ ಅಂಗನವಾಡಿ ಕೇಂದ್ರ

Vishwanath S
Updated On : 15 Dec 2013, 1:31 am

ಮಾಗಡಿ: ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ನೂತನ ಹೈಟೆಕ್  ಅಂಗನವಾಡಿ ಕೇಂದ್ರ  ಸ್ಥಾಪಿಸಲಾಗುತ್ತಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ತಿಳಿಸಿದರು.
ಅವರು ತಾಲೂಕಿನ ಮಾಡಬಾಳ್ ಹೋಬಳಿಯ ಸುಂಕುತಿಮ್ಮನಪಾಳ್ಯದ ಬಳಿ ಸುಮಾರು 12 ಲಕ್ಷ ರು. ವೆಚ್ಚದಲ್ಲಿ ನೂತನ ಹೈಟೆಕ್  ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡುತ್ತಾ ಗ್ರಾಮೀಣ ಮಕ್ಕಳು ಅಗತ್ಯ ಶಿಕ್ಷಣ ಪಡೆದರೆ ಸಮಾಜದಲ್ಲಿ ಸತ್ಪ್ರಜೆಗಳಾಗಬಹುದು. ಈ ನಿಟ್ಟಿನಲ್ಲಿ ಸಮಾಜ ಮುಖಿಯಾಗಲು ಅನುಕೂಲವಾಗುತ್ತದೆ.  ಗ್ರಾಮೀಣ ಭಾಗದಲ್ಲಿ ಅಗತ್ಯ ಶಾಲಾ, ಕಾಲೇಜು ಕಟ್ಟಡಗಳ ನಿರ್ಮಾಣ,ಅಂಗನವಾಡಿ ಕೇಂದ್ರಗಳನ್ನು ಸ್ಥಾಪಿಸಲು ಹೆಚ್ಚು ಒತ್ತು ನೀಡಿದ್ದು, ಅಗತ್ಯ ಕ್ರಮ ಕೈಗೊಂಡಿದ್ದೇನೆ ಎಂದರಲ್ಲದೆ ಬಡ ಮಕ್ಕಳ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಗುತ್ತಿಗೆದಾರರು ಸಹ ಗುಣಮಟ್ಟದ ಸಾಮಗ್ರಿಗಳನ್ನು ಬಳಸಬೇಕು. ಜತೆಗೆ ಗುಣಮಟ್ಟ ಕಾಪಾಡುವಂತೆ ಕರೆ ನೀಡಿದರು.
ತಾ.ಪಂ. ಅಧ್ಯಕ್ಷ ಜಿ.ಕೃಷ್ಣ, ಉಪಾಧ್ಯಕ್ಷೆ ಭಾರತಿ ಮಹದೇವಯ್ಯ, ಜಿ.ಪಂ. ಸದಸ್ಯ ವಿಜಯಕುಮಾರ್, ಮಾಡಬಾಳ್ ಗ್ರಾ.ಪಂ. ಅಧ್ಯಕ್ಷ ಮಂಜುನಾಥ್, ಸದಸ್ಯ ಶಿವಬೀರಯ್ಯ, ರಂಗನಾಥ್, ಎಂಜಿನಿಯರ್ ಗುರುಶಂಕರ್, ಜಯಕುಮಾರ್, ಮೋಹನ್, ಎಂ.ಎಚ್. ಶ್ರೀನಿವಾಸ್, ನಾಗರಾಜು, ನರಸೇಗೌಡ, ಶಿವಣ್ಣ, ರಂಗಸ್ವಾಮಿ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement