ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಧಾರ್ಮಿಕ ಚಿಂತನೆಗಳು ದೇಶ ಕಟ್ಟುತ್ತವೆ: ನರಸಿಂಹಮೂರ್ತಿ

Vishwanath S
Updated On : 17 Dec 2013, 12:46 pm

ದೊಡ್ಡಬಳ್ಳಾಪುರ: ಧಾರ್ಮಿಕ ಚಿಂತನೆಗಳು ದೇಶ ಕಟ್ಟುತ್ತವೆ. ವಿಚಾರವಂತಿಕೆಯ ಜೊತೆಜೊತೆಗೆ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳದಿದ್ದರೆ ನಾವು ನಮ್ಮ ನಿಜವಾದ ಅಸ್ವಿತ್ವವನ್ನು ಕಂಡುಕೊಳ್ಳಲು ವಿಫಲರಾಗುತ್ತೇವೆ ಎಂದು ಮುದ್ದೇನಹಳ್ಳಿಯ ಶ್ರೀಸತ್ಯಸಾಯಿ ಸರಸ್ವತಿ ಎಜುಕೇಶನ್ ಟ್ರಸ್ಟ್‌ನ ಡಿ.ಎನ್. ನರಸಿಂಹಮೂರ್ತಿ ಅಭಿಪ್ರಾಯ ಪಟ್ಟರು.
ಇಲ್ಲಿನ ಡಿಕ್ರಾಸ್ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಭಾನುವಾರ ನಡೆದ 39ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಂಡಲ ಪೂಜಾ ಕಾರ್ಯಕ್ರಮದಲ್ಲಿ ಶ್ರೀಅಯ್ಯಪ್ಪ ಭವನ ಉದ್ಘಾಟಿಸಿ ಅವರು ಮಾತನಾಡಿದರು.
ಅದ್ದೂರಿ ಉತ್ಸವ: ಮಂಡಲ ಪೂಜಾ ಕಾರ್ಯಕ್ರಮದ ಅಂಗವಾಗಿ ಶ್ರೀ ಅಯ್ಯಪ್ಪಸ್ವಾಮಿ ಜ್ಯೋತಿ ಉತ್ಸವ ರಾತ್ರಿ ವಿಜೃಂಭಣೆಯಿಂದ ನಡೆಯಿತು. ನೂರಾರು ಮಕ್ಕಳು ಜ್ಯೋತಿಗಳನ್ನು ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ವಿವಿಧ ಸಾಂಸ್ಕೃತಿಕ ತಂಡಗಳೊಂದಿಗೆ ಮೆರವಣಿಗೆ ಆಕರ್ಷಣೆಗೆ ಪಾತ್ರವಾಯಿತು. ಕೇರಳದ ಕಣ್ಣಾನೂರಿನಿಂದ ಇರುಕೋಡುವ ಶ್ರೀಪ್ರಜೀತ್ ತಂಡದ ಸಿಂಗಾರಿ ಚಂಡೆ ಮೇಳ, ಜಾನಪದ ಕಲಾಭೂಷಣ ಎನ್. ರುದ್ರೇಶ್‌ಪ್ರಸಾದ್ ಮತ್ತು ತಂಡದ ವೀರಭದ್ರನ ಕುಣಿತ, ಡೊಳ್ಳುಕುಣಿತ, ತಮಟೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿದ್ದವು. ದೇವಾಲಯದಿಂದ ಹೊರಟ ಮೆರವಣಿಗೆ ಗಾಂಧಿ ವೃತ್ತ, ಸೌಂದರ್ಯಮಹಲ್ ವೃತ್ತ, ಸಿದ್ದಲಿಂಗಯ್ಯ ವೃತ್ತ, ಕೋಟೆ ರಸ್ತೆ, ಕೊಂಗಾಡಿಯಪ್ಪ ಮುಖ್ಯರಸ್ತೆ ಮಾರ್ಗವಾಗಿ ಸಂಚರಿಸಿತು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement