ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ

Vishwanath S
Updated On : 19 Dec 2013, 1:07 am

ಕನಕಪುರ: ವೃತ್ತಿ ಶಿಕ್ಷಣ ಪ್ರವೇಶ ಕಾಯಿದೆಯನ್ನು ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರಲು ಮುಂದಾಗಿರುವುದನ್ನು ವಿರೋಧಿಸಿ ಕನಕಪುರ ತಾಲೂಕಿನಾದ್ಯಂತ ವಿದ್ಯಾರ್ಥಿಗಳು ಎಬಿವಿಪಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಕನಕಪುರ, ಸಾತನೂರು, ಹಾರೋಹಳ್ಳಿ ಗ್ರಾಮಗಳಲ್ಲಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡು ಮೆರವಣಿಗೆ ನಡೆಸಿ ಘೋಷಣೆಗಳನ್ನು ಕೂಗಿದರು.
ಎಬಿವಿಪಿ ಜಿಲ್ಲಾ ಸಂಚಾಲಕ ರಘುರಾಂ ಮಾತನಾಡುತ್ತಾ ರಾಜ್ಯ ಸರ್ಕಾರವು ವಿದ್ಯೆಯನ್ನು ಮಾರಾಟಕ್ಕಿರಿಸಿರುವ ವೃತ್ತಿಶಿಕ್ಷಣ ಕಾಲೇಜುಗಳೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದೆ. ಕೆಲವೇ ಸಾವಿರ ರು.ಗಳಿಗೆ ದೊರೆಯುತ್ತಿದ್ದ ಶಿಕ್ಷಣಕ್ಕೆ ಲಕ್ಷಾಂತರ ಬೆಲೆ ನಿಗದಿಗೊಳಿಸಲು ಮುಂದಾಗಿದ್ದು ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಗಗನ ಕುಸುಮವಾಗಿದೆ. ಬಡವಿದ್ಯಾರ್ಥಿಗಳ ಪಾಲಿಗಂತೂ ಉನ್ನತ ಶಿಕ್ಷಣ ಕನ್ನಡಿಯ ಗಂಟಾಗಲಿದೆ. ಸರ್ಕಾರವು ಈ ಜನವಿರೋಧಿ, ವಿದ್ಯಾರ್ಥಿ ವಿರೋಧಿ ನಿಲುವಿನಿಂದ ಹಿಂದೆ ಸರಿಯದಿದ್ದರೆ, ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ರಘುರಾಂ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement