ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಹಿರಿಯರ ಅಥ್ಲೆಟಿಕ್ ಕ್ರೀಡಾಕೂಟ

Srinivasa Murthy VN
Updated On : 19 Dec 2013, 11:59 am

ಕನಕಪುರ: ಕರ್ನಾಟಕ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ಹಾಗೂ ರಾಮನಗರ ಜಿಲ್ಲಾ ಹಿರಿಯರ ಅಥ್ಲೆಟಿಕ್ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ಹಿರಿಯರ ಅಥ್ಲೆಟಿಕ್ ಕ್ರೀಡಾಕೂಟ ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.21, 22 ರಂದು ನಡೆಯಲಿದ್ದು ಉದ್ಘಾಟನೆಯನ್ನು ಶಾಸಕ ಡಿ.ಕೆ.ಶಿವಕುಮಾರ್ ನೆರವೇರಿಸಲಿದ್ದಾರೆ.  ವಿರೋಧಪಕ್ಷ ನಾಯಕ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆ ವಹಿಸುತ್ತಾರೆ. ಮುಖ್ಯ ಅತಿಥಿಗಳಾಗಿ ಮಾಸ್ಟರ್
ಅಥ್ಲೆಟಿಕ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಡೇವಿಡ್ ಪ್ರೇಮನಾಥ್, ಶಾಸಕರಾದ ಡಿ.ಕೆ.ಶಿವಕುಮಾರ್, ಸಿ.ಪಿ.ಯೋಗೀಶ್ವರ, ಎಚ್.ಸಿ. ಬಾಲಕೃಷ್ಣ, ಜಿಪಂ ಅಧ್ಯಕ್ಷ ಎಚ್.ಸಿ.ರಾಜಣ್ಣ, ಜಿಪಂ ಸಿಇಓ ಡಾ.ಎಂ.ವಿ.ವೆಂಕಟೇಶ್ ಪಾಲ್ಗೊಳ್ಳಲಿದ್ದಾರೆ.
ಡಿ.22 ರಂದು ಸಂಜೆ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸಂಸದ ಡಿ.ಕೆ.ಸುರೇಶ್ ವಹಿಸಲಿದ್ದು ಸನ್ಮಾನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯಕಾರ್ಯದರ್ಶಿ ಕೃಷ್ಣಮೂರ್ತಿ, ಮಾಜಿ ಸಚಿವ ರೇವಣ್ಣ, ವಿಪ ಸದಸ್ಯ ಪುಟ್ಟಣ್ಣ, ವಿಪ ಮಾಜಿ ಸದಸ್ಯ ಎಸ್.ರವಿ, ಜಿಲ್ಲಾ ಗೌ.ಅಧ್ಯಕ್ಷ ಡಾ.ಟಿ.ಎನ್. ವಿಜಯಕುಮಾರ್, ಕಾರ್ಯಾಧ್ಯಕ್ಷ ಪ್ರೊ. ಶಿವನಂಜಯ್ಯ, ಸಂಸ್ಥಾಪಕ ಅಧ್ಯಕ್ಷ ವಸಂತಕುಮಾರ್, ಉಪಾಧ್ಯಕ್ಷ ಮರಳವಾಡಿ ಉಮಾಶಂಕರ್ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಭಾನುಪ್ರಕಾಶ್ ತಿಳಿಸಿದ್ದಾರೆ.

ಯಲಿಯೂರಲ್ಲಿ ಸುಗಮ ಸಂಗೀತ
ದೇವನಹಳ್ಳಿ: 
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಡಿಬೆಲೆ ಸುರಭಿ ಕ್ರೀಡಾ ಮತ್ತು ಸಾಂಸ್ಕೃತಿಕ ಕಲಾ ಸಂಘ  ಸಂಯುಕ್ತ ಆಶ್ರಯದಲ್ಲಿ ದೇವನಹಳ್ಳಿ ತಾಲೂಕು ಯಲಿಯೂರು ಗ್ರಾಮದಲ್ಲಿ ಸುಗಮ ಸಂಗೀತ ಗಾಯನ ಆಯೋಜಿಸಲಾಗಿತ್ತು.
ಸಮಾರಂಭದ ಉದ್ಘಾಟನೆಯನ್ನು ಮಾಜಿ ಶಾಸಕ ಡಿ.ಎಸ್.ಗೌಡ ನೆರವೇರಿಸಿ ಇಂದು ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ದೇಶಿಯ ಕಲೆ ಮತ್ತು ಸಂಸ್ಕೃತಿ ಕಾಣಬಹುದಾಗಿದೆ. ಆದರೆ ನಗರ ಪ್ರದೇಶಗಳಲ್ಲಿ ಎಲ್ಲಿ ನೋಡಿದರೂ ಪಾಶ್ಚಾತ್ಯ ಸಂಸ್ಕೃತಿಗೆ ಯುವಜನತೆ ಮಾರುಹೋಗಿದ್ದಾರೆ ಎಂದರಲ್ಲದೆ ನಮ್ಮ ಮುಂದಿನ ಪೀಳಿಗೆಗಾಗಿಯಾದರೂ ಜಾನಪದ ಸಂಸ್ಕೃತಿ ಮತ್ತು ಕಲೆ ಉಳಿಸಬೇಕಾಗಿದೆ ಎಂದರು.
ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಹನುಮಂತರಾಯಪ್ಪ ಮಾತನಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು ಸ್ಥಳೀಯ ಸಂಘ ಸಂಸ್ಥೆಗಳೊಂದಿಗೆ ಸಹಕಾರ ನೀಡಿ ನಮ್ಮ ಕನ್ನಡ ನಾಡಿನ ಕಲೆ ಪರಂಪರೆ ಮತ್ತು ಸಂಸ್ಕೃತಿ ಯುವಜನರಲ್ಲಿ ಆಸಕ್ತಿ ಬರುವಂತೆ ಮಾಡುತ್ತಿದೆ ಎಂದರು. ಇಂತಹ ಸಮಾರಂಭಗಳಲ್ಲಿ ಎಲ್ಲ ಗ್ರಾಮೀಣ ಯುವಕ ಯುವತಿಯರು ಭಾಗವಹಿಸಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement