ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಶಿಕ್ಷಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿ

Srinivasa Murthy VN
Updated On : 22 Dec 2013, 12:16 pm

ಕ.ಪ್ರ.ವಾರ್ತೆ ದೊಡ್ಡಬಳ್ಳಾಪುರ ಡಿ.21
ಶಿಕ್ಷಣ ಇಲಾಖೆಯಿಂದಲೇ ಶಿಕ್ಷಕರು ಇಂದು ಶೋಷಣೆಗೆ ಒಳಗಾಗುತ್ತಿದ್ದಾರೆ. ಈ ಹಂತದಲ್ಲಿ ಶಿಕ್ಷಣ ಇಲಾಖೆಯನ್ನು ಸಮರ್ಥವಾಗಿ ನಿರ್ವಹಿಸುವ ಸಚಿವರು ಇದುವರೆಗೆ ಬಾರದಿರುವುದು ದುರಂತ ಎಂದು ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಹೇಳಿದರು.
ಇಲ್ಲಿನ ಪಾಲನಜೋಗಿಹಳ್ಳಿಯ ಫ್ರೆಂಡ್ಸ್ ಪಂಕ್ಷನ್ ಹಾಲ್‌ನಲ್ಲಿ ನಡೆದ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಎಲ್ಲ ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅದೇ ರೀತಿ ಶೈಕ್ಷಣಿಕ ಕ್ಷೇತ್ರದಲ್ಲಿ ಕೂಡ ಭ್ರಷ್ಟರ ದೊಡ್ಡ ಗುಂಪೇ ಇದೆ. ಇದು ಇಡೀ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಹಾಳು ಮಾಡುತ್ತಿದೆ. ಕೇಂದ್ರೀಯ ಪಠ್ಯ ಕ್ರಮದ ಪುಸ್ತಕಗಳನ್ನು ಹೊರತರುವಲ್ಲಿ ಯಾವುದೇ ವ್ಯವಸ್ಥಿತ ಮಾನದಂಡ ಮತ್ತು ಯೋಜನೆಗಳನ್ನು ರೂಪಿಸದೆ ಸರ್ಕಾರ ಅವೈಜ್ಞಾನಿಕವಾಗಿ ವರ್ತಿಸುತ್ತಿದೆ. ಇದು ಖಂಡನೀಯ. ಶಿಕ್ಷಕರನ್ನು ಪಾಠ ಮಾಡಲೂ ಬಿಡದೆ ಎಲ್ಲ ಬಗೆಯ ಗಣತಿ ಕಾರ್ಯಗಳು, ಇತರೆ ಕೆಲಸಗಳಿಗೆ ನಿಯೋಜಿಸಿ ಹೆಚ್ಚುವರಿ ಹೊರೆ ಹೊರಿಸುತ್ತಿದೆ. ಕೆಲವೆಡೆಯಂತೂ ಶಿಕ್ಷಕರನ್ನು ಅಡುಗೆ ಭಟ್ಟರಾಗಿ ನೋಡುವ ಪರಿಸ್ಥಿತಿ ಎದುರಾಗಿದ್ದರೆ ಅದಕ್ಕೆ ಸರ್ಕಾರವೇ ಕಾರಣ. ದೇಶದ ಭವಿಷ್ಯದ ಸದೃಢ ಸಮಾಜ ನಿರ್ಮಾಣದ ಮಹತ್ವದ ಹೊಣೆಗಾರಿಕೆ ನಿಭಾಯಿಸುವ ಶಿಕ್ಷಕರಿಗೆ ಸ್ವಾತಂತ್ರ್ಯ ಕೊಡಿ. ಅವರನ್ನು ಮಾನವೀಯವಾಗಿ ನಡೆಸಿಕೊಳ್ಳಿ. ಅವರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸಬೇಕಾದ ಹೊಣೆಗಾರಿಕೆ ಸರ್ಕಾರದ್ದು ಎಂದು ಆಗ್ರಹಿಸಿದರು.
ಕಿಮ್ಸ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಆಂಜನಪ್ಪ, ಕರ್ನಾಟಕ ರಾಜ್ಯ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ತಾ.ಪಂ ಮಾಜಿ ಅಧ್ಯಕ್ಷ ಡಿ.ನಾಗರಾಜು ಸೇರಿದಂತೆ ಅನೇಕ ಶಿಕ್ಷಕ ಪ್ರತಿನಿಧಿಗಳು, ಉಪನ್ಯಾಸಕರು, ಪ್ರಾಂಶುಪಾಲರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement