ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಖೇಶ್‌ಬಾಬು ಪ್ರಥಮ

Rashmi Kasaragodu
Updated On : 25 Dec 2013, 2:24 am

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದ ಸರ್ಕಾರಿ ಬಾಲಕಿಯರ ಮಾಧ್ಯಮಿಕ ಶಾಲೆಯ ಶಿಕ್ಷಕ ಆರ್. ಮುಖೇಶ್‌ಬಾಬು ರಾಮನಗರದಲ್ಲಿ ನಡೆದ ರಾಜ್ಯ ಮಟ್ಟದ ಪುರುಷರ 35 ವರ್ಷ ಮೇಲ್ಪಟ್ಟ ಮಾಸ್ಟರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಪ್ರತಿನಿಧಿಸಿ 110 ಮೀಟರ್ ಹರ್ಡಲ್ಸ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ರಾಜ್ಯದ 30 ಜಿಲ್ಲೆಗಳಿಂದಲೂ ಸ್ಪರ್ಧಿಗಳು ಭಾಗವಹಿಸಿದ್ದ ಕ್ರೀಡಾಕೂಟದಲ್ಲಿ ಮುಖೇಶ್‌ಬಾಬು ಗಣನೀಯ ಸಾಧನೆ ಮಾಡಿದ್ದು, ನಿವೃತ್ತ ಪೊಲೀಸ್ ಅಧಿಕಾರಿ ಹನುಮಂತರಾವ್ ಮುಖೇಶ್‌ಬಾಬುಗೆ ಪ್ರಶಸ್ತಿ ಪತ್ರ, ಪದಕ ಪ್ರದಾನ ಮಾಡಿದರು. ಜಿಲ್ಲಾ ಮಾಸ್ಟರ್ ಅಥ್ಲೆಟಿಕ್ಸ್ ಮುಖಂಡ ಭಾನುಪ್ರಕಾಶ್, ಕಾರ್ಯದರ್ಶಿ ತಿಮ್ಮೇಗೌಡ ಇತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement