ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಶಾಶ್ವತ ನೀರಾವರಿಗೆ ಬೃಹತ್ ಸಮಾವೇಶ ಇಂದು

Rashmi Kasaragodu
Updated On : 25 Dec 2013, 2:22 am

ದೊಡ್ಡಬಳ್ಳಾಪುರ: ಶಾಶ್ವತ ನೀರಾವರಿ ಯೋಜನೆಗೆ ಜಾರಿಗೆ ಒತ್ತಾಯಿಸಿ ದೊಡ್ಡಬಳ್ಳಾಪುರ ತಾಲೂಕು ಶಾಶ್ವತ ನೀರಾವರಿ ಹೋರಾಟ ಸಮಿತಿ ಮತ್ತು ಮಧುರೆ ಹೋಬಳಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಆಶ್ರಯದಲ್ಲಿ ಡಿ.25ರ ಬುಧವಾರ ಬೆಳಗ್ಗೆ 11ಗಂಟೆಗೆ ಕನಸವಾಡಿಯ ಸರ್ಕಾರಿ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜನೆಗೊಂಡಿದೆ. ಅಪಾರ ಸಂಖ್ಯೆಯಲ್ಲಿ ಜನ ಭಾಗವಹಿಸುವ ನಿರೀಕ್ಷೆ ಇದೆ. ಸಮಾವೇಶದಲ್ಲಿ ನೀರಿನ ಬವಣೆಯ ಸ್ಥಿತಿಗತಿ, ಸರ್ಕಾರಗಳ ಹೊಣೆಗಾರಿಕೆ-ವೈಫಲ್ಯ, ಹೋರಾಟದ ದಿಕ್ಕು-ದೆಸೆ, ಭವಿಷ್ಯದ ಹಿತ ಚಿಂತನೆ ಕುರಿತು ಚರ್ಚೆ ಮತ್ತು ವಿಚಾರ ಮಂಥನ ನಡೆಯಲಿದ್ದು, ಮುಂದಿನ ಹೋರಾಟದ ರೂಪರೇಷೆಗಳನ್ನು ನಿರ್ಧರಿಸಲಾಗುವುದು. ಎಲ್ಲ ರಾಜಕೀಯ ಪಕ್ಷಗಳು, ಸಂಘಟನೆಗಳು, ಪ್ರಗತಿಪರರು, ಮಹಿಳೆಯರು, ವಿದ್ಯಾರ್ಥಿಗಳು ಭಾಗವಹಿಸಲು ಸಂಘಟಕರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement