ಸ್ವಾಸ್ತ್ಯ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದು
ಮಾಗಡಿ: ಸ್ವಾಸ್ತ್ಯ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ನುಡಿದರು.
ಅವರು ತಿರುಮಲೆ ಶ್ರೀರಂಗನಾಥಸ್ವಾಮಿ ದೇವಾಲಯದಲ್ಲಿ ಎಂ.ಎಸ್. ಸಿದ್ದಲಿಂಗೇಶ್ವರ್ ಸಂಪಾದಕತ್ವದಲ್ಲಿ ರಾಜಕೀಯ ಬ್ರಹ್ಮಾಸ್ತ್ರ ವಿಶೇಷ ಸಂಚಿಕೆ ಬಿಡುಗಡೆ ಹಾಗೂ ನೂತನ ವರ್ಷಾರಂಭದ ಕ್ಯಾಲೆಂಡರ್ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಥಳೀಯ ಪತ್ರಿಕೆಗಳು ತಮ್ಮ ಲೇಖನಿ ಮೂಲಕ ನೈಜ ಸುದ್ದಿಗಳನ್ನು ಬಿತ್ತರಿಸುತ್ತಿದ್ದು, ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಸಮಾಜದಲ್ಲಿ ಸಾಮರಸ್ಯಕ್ಕೆ ಪ್ರಮುಖವಾದ ಪಾತ್ರ ವಹಿಸುತ್ತಿವೆ. ಪತ್ರಿಕೆಗಳಿಂದ ಸಮಾಜಕ್ಕೆ ಮತ್ತಷ್ಟು ಉತ್ತಮ ಸಂದೇಶ ನೀಡುವಂತಾಗಲಿ ಎಂದು ಆಶಿಸಿದರು.
ಸಮಾಜದ ಆಗು ಹೋಗುಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಮೂಲಕ ಸಮಾಜದ
ಸರ್ವತೋಮುಖ ಬೆಳವಣಿಗೆಗೆ ಪತ್ರಿಕೋದ್ಯಮ ನೀಡುತ್ತಿರುವ ಕೊಡುಗೆ ಅಪಾರ ಎಂದು ಜಿಪಂ ಜಿ.ಪಂ. ಸದಸ್ಯ ಎಂ.ಕೆ. ಧನಂಜಯ ಹೇಳಿದರು. ಕಾಂಗ್ರೆಸ್ ಮುಖಂಡ ಬಿ.ವಿ.ಜಯರಾಮು ಮಾತನಾಡಿದರು. ಹಿತ್ತಲಹಳ್ಳಿ ಮಠದ ಶಿವಚಾರ್ಯಸ್ವಾಮಿಜೀ ಆಶೀರ್ವಚನ ನೀಡಿದರು.
ಜಿಲ್ಲಾ ಪಂಚಾಯ್ತಿ ಸದಸ್ಯ ವಿಜಯಕುಮಾರ್, ತಾ.ಪಂ. ಅಧ್ಯಕ್ಷ ಜಿ.ಕೃಷ್ಣ, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್. ಕಾಂತರಾಜು, ಸದಸ್ಯರಾದ ಶಂಕರಪ್ಪ, ಅನುಸೂಯಮ್ಮ ಕಾಂತರಾಜು, ಪುರಸಭಾ ಸದಸ್ಯರಾದ ಎಂ.ಎನ್.ಮಂಜುನಾಥ್, ಕೆ.ವಿ. ಬಾಲು, ಮಾಜಿ ಅಧ್ಯಕ್ಷ ಪಿ.ವಿ.ಸೀತಾರಾಂ, ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಎಸ್.ಪ್ರಕಾಶ್ ಇತರರು ಇದ್ದರು.