ಪೊಲೀಸರ ವಾರ್ಷಿಕ ಕ್ರೀಡಾಕೂಟ
ರಾಮನಗರ: ಜಿಲ್ಲಾ ಪೊಲೀಸರ ವಾರ್ಷಿಕ ಕ್ರೀಡಾ ಕೂಟವು ಡಿ.26 ಮತ್ತು 27ರಂದು ಚನ್ನಪಟ್ಟಣದ ಜಿಲ್ಲಾ ಪೊಲೀಸ್ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ನಡೆಯಲಿದೆ.
ಕ್ರೀಡಾಕೂಟವನ್ನು ಡಿ.26ರ ಬೆಳಗ್ಗೆ 8ಕ್ಕೆ ಜಿಲ್ಲಾಧಿಕಾರಿ ಡಾ.ಡಿ.ಎಸ್.ವಿಶ್ವನಾಥ್ ಉದ್ಘಾಟಿಸುವರು. ಡಿ.27ರ ಮಧ್ಯಾಹ್ನ 3.30 ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದ್ದು ಕೇಂದ್ರ ವಲಯ ಐಜಿಪಿ ಅಮರ್ಕುಮಾರ್ ಪಾಂಡೆ ಭಾಗವಹಿಸುವರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.