ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಮಹಿಳೆಯೊಂದಿಗೆ ಗ್ರಾಪಂ ಸದಸ್ಯನ ಅಸಭ್ಯ ವರ್ತನೆ: ಸೆರೆ

Rashmi Kasaragodu
Updated On : 26 Dec 2013, 12:23 pm

ನೆಲಮಂಗಲ: ಮಹಿಳೆಯೊಂದಿಗೆ ಅಸಭ್ಯವಾಗಿ ಗ್ರಾಮ ಪಂಚಾಯ್ತಿ ಸದಸ್ಯ ವರ್ತಿಸಿದ್ದಾನೆ ಎಂಬ ದೂರಿನ ಮೇರೆಗೆ ಆತನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಬಂಧಿತ ಆರೋಪಿ ಮಾದನಾಯಕನಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ಶ್ರೀನಿವಾಸಮೂರ್ತಿ ಅಲಿಯಾಸ್ ಟೆಂಪೋ ಸೀನ. ಈತ ಮಾದನಾಯಕನಹಳ್ಳಿ ವಾಸಿ ಸುಮಿತ್ರ (ಹೆಸರು ಬದಲಿಸಿದೆ) ಎಂಬಾಕೆ ಗಾರ್ಮೆಂಟ್ಸ್ ಕಾರ್ಖಾನೆಯಿಂದ ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ಮಾರ್ಗ ಮಧ್ಯೆ ರಸ್ತೆಯಲ್ಲಿ ಆಕೆಯನ್ನು ಅಡ್ಡಗಟ್ಟಿ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆಕೆ ಪೊಲೀಸರಿಗೆ ದೂರು ನೀಡಿದಳು. ಪರಿಣಾಮ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement