ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಉಚಿತ ಆರೋಗ್ಯ ತಪಾಸಣೆ ಶಿಬಿರ ಇಂದು

Mainashree
Updated On : 28 Dec 2013, 12:22 pm

ದೊಡ್ಡಬಳ್ಳಾಪುರ: ಇಲ್ಲಿನ ಸೃಷ್ಟಿ ಟ್ರಸ್ಟ್ ನೇತೃತ್ವದಲ್ಲಿ ಆಯುಷ್ ಇಲಾಖೆ ಮತ್ತು ಆರ್ಯನ್ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ ಮತ್ತು ಹೃದಯ ತಪಾಸಣೆ ಶಿಬಿರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಡಿ.28ರ ಶನಿವಾರ ಬೆಳಗ್ಗೆ 10.30ರಿಂದ ಮಧ್ಯಾಹ್ನ 2.30ರವರೆಗೆ ನಡೆಯಲಿದೆ. ರಕ್ತಹೀನತೆ, ಮಂಡಿನೋವು, ಕೀಲುನೋವು, ಉಬ್ಬಸ, ಕೆಮ್ಮು, ಚರ್ಮವ್ಯಾದಿ, ಮೂಲವ್ಯಾಧಿ, ರಕ್ತದೊತ್ತಡ, ಬೊಜ್ಜು, ಮಧುಮೇಹ, ನಿದ್ರಾಹೀನತೆ ಇತರ ಕಾಯಿಲೆಗಳಿಗೆ ತಜ್ಞ ವೈದ್ಯರಿಂದ ತಪಾಸಣೆ, ಔಷಧಿ ವಿತರಣೆ ನಡೆಯಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಇಂದು ಪದನೋನ್ನತಿ ಬಡ್ತಿ ಮುಖ್ಯ ಶಿಕ್ಷಕರ ಸಭೆ
ಸೂಲಿಬೆಲೆ: ಹೊಸಕೋಟೆಯಲ್ಲಿರುವ ಸರ್ಕಾರಿ ಮಾದರಿ ಶಾಲೆಯಲ್ಲಿ ಡಿ.28 ರಂದು ಪದವೀಧರೇತರ ಹಾಗೂ ಪದೋನ್ನತಿ ಬಡ್ತಿ ಮುಖ್ಯ ಶಿಕ್ಷಕರ ಸಭೆಯನ್ನು ಕರೆದಿದ್ದು, ಕುಂದು ಕೊರತೆಗಳನ್ನು ಚರ್ಚಿಸುವ ಸಂಬಂಧ ಎಲ್ಲ ಮುಖ್ಯ ಶಿಕ್ಷಕರು ಸಭೆಯಲ್ಲಿ ಭಾಗವಹಿಸುವಂತೆ  ಶರಣಪ್ಪ ಕಂಬಳಿ ಪ್ರಕಟಣಿಯಲ್ಲಿ ಕೋರಿದ್ದಾರೆ.
ಕನ್ನಡ ಜಾಗೃತಿ ಉಪನ್ಯಾಸ ಇಂದು
ದೊಡ್ಡಬಳ್ಳಾಪುರ: ಇಲ್ಲಿನ ನಾಗದಳ ನೇತೃತ್ವದಲ್ಲಿ ಕನ್ನಡ ಜಾಗೃತಿ ಉಪನ್ಯಾಸ ಕಾರ್ಯಕ್ರಮ ಡಿ.28ರ ಶನಿವಾರ ಬೆಳಗ್ಗೆ 10.30ಕ್ಕೆ ಕನ್ನಡ ಜಾಗೃತ ಭವನದಲ್ಲಿ ನಡೆಯಲಿದೆ. ಕನ್ನಡಪರ ಹೋರಾಟಗಾರ ಕೆ.ರಾಜ್‌ಕುಮಾರ್ ಕನ್ನಡವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಂಘಟನೆಗಳ ಪಾತ್ರ ಮತ್ತು ಅರ್ಥಪೂರ್ಣ ರಾಜ್ಯೋತ್ಸವ ಆಚರಣೆ ಕುರಿತು ಮಾತನಾಡಲಿದ್ದಾರೆ. ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಇಂದು ರಕ್ತ ದಾನ ಶಿಬಿರ
ಸೂಲಿಬೆಲೆ: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಡಿ.28 ರಂದು ಶನಿವಾರ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಮೋರ್ಚಾ ಘಟಕದವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ  ಹುಟ್ಟುಹಬ್ಬದ ಪ್ರಯುಕ್ತ ನಡೆಯಲಿರುವ ರಕ್ತದಾನ ಶಿಬಿರದಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಣಿಯಿಂದ ರಕ್ತದಾನ ಮಾಡಬಹುದು. ಬೆಳಿಗ್ಗೆ10.30ಕ್ಕೆ ಪ್ರಾರಂಭವಾಗಲಿರುವ ಶಿಬಿರವನ್ನು ಮಾಜಿ ಸಚಿವ ಬಿ.ಎನ್. ಬಚ್ಚೇಗೌಡ ಉದ್ಘಾಟಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement