ಸಮಾಲೋಚನಾ ತರಗತಿ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ವರ್ಷದ ಬಿ.ಎ., ಬಿಕಾಂ ಕೋರ್ಸುಗಳಿಗೆ ರಾಮನಗರ ಪ್ರಾದೇಶಿಕ ಕೇಂದ್ರದಲ್ಲಿ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ವಾರಾಂತ್ಯ ಸಮಾಲೋಚನಾ ತರಗತಿಗಳು ಜ.5 ರಿಂದ ಪ್ರತಿ ಭಾನುವಾರ, 2ನೇ ಶನಿವಾರ ಹಾಗೂ ಎಲ್ಲಾ ಸರ್ಕಾರಿ ರಜಾ ದಿನಗಳಲ್ಲಿ ನಡೆಯಲಿವೆ.
ಪ್ರಥಮ ಹಾಗೂ ದ್ವಿತೀಯ ಬಿಎ ವಿದ್ಯಾರ್ಥಿಗಳಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮೂರು ವರ್ಷದ ಬಿಎ ವಿದ್ಯಾರ್ಥಿಗಳಿಗೆ ಕನಕಪುರದ ರೂರಲ್ ಕಾಲೇಜು ಇಲ್ಲಿ ತರಗತಿಗಳನ್ನು ನಡೆಸಲಾಗುವುದು. ರಾಮನಗರ ಅಧ್ಯಯನ ಕೇಂದ್ರವನ್ನು ಆಯ್ಕೆ ಮಾಡಿಕೊಂಡಿರುವ ತತೀಯ ಬಿಎ ವಿದ್ಯಾರ್ಥಿಗಳು ಮತ್ತು ದ್ವಿತೀಯ, ತೃತೀಯ ವರ್ಷದ ಬಿಕಾಂ ವಿದ್ಯಾರ್ಥಿಗಳು ಬೆಂಗಳೂರಿನ ನಿಗದಿತ ಅಧ್ಯಯನ ಕೇಂದ್ರಗಳಲ್ಲಿ ತರಗತಿಗಳಿಗೆ ಹಾಜರಾಗುವುದು. ಹೆಚ್ಚಿನ ಮಾಹಿತಿಗೆ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಪ್ರಾದೇಶಿಕ ಕೇಂದ್ರ, ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆ, ಬಿ.ಎಂ.ರಸ್ತೆ, ರಾಮನಗರ ದೂ. 080-27274443, ಮೊ. 9620973666 ಸಂಪರ್ಕಿಸಬಹುದು.